ಹಡಪದ ಅಪ್ಪಣ್ಣನವರ ಬದುಕು, ವಿಚಾರ ಇಂದಿನ ಸಮಾಜಕ್ಕೆ ಅವಶ್ಯಕ : ಅಪರ ಜಿಲ್ಲಾಧಿಕಾರಿ ಡಾ.ಈಶ್ವರ್ ಉಳ್ಳಾಗಡ್ಡಿ

ಬೀದರ್ : ಹಡಪದ ಅಪ್ಪಣ್ಣನವರ ಬದುಕು ಮತ್ತು ವಿಚಾರಗಳು ವಚನಗಳಲ್ಲಿ ಅಡಕವಾಗಿದ್ದು, ಇಂದಿನ ಸಮಾಜಕ್ಕೆ ಅತಿ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಈಶ್ವರ್ ಉಳ್ಳಾಗಡ್ಡಿ ಅವರು ತಿಳಿಸಿದರು.
ಇಂದು ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಡಪದ ಅಪ್ಪಣ್ಣನವರು ಬಸವಣ್ಣನವರ ಆಪ್ತರಾಗಿದ್ದು, ಅದ್ಭುತವಾದ ವಚನಗಳು ಹೇಳಿದ್ದಾರೆ. ಅವರು ಕಾಯಕ ತತ್ವದಲ್ಲಿ ನಿಷ್ಠೆ ಉಳ್ಳವರಾಗಿದ್ದರು. ಅವರ ವಚನಗಳಲ್ಲಿದ್ದ ವಿಚಾರಗಳು ಇಂದಿನ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಹಿರಿಯ ಸಾಹಿತಿ ಶಂಭುಲಿಂಗ್ ಅವರು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹಡಪದ ಅಪ್ಪಣ್ಣ ಸಮಾಜ ಸಂಘದ ದತ್ತಾತ್ರಿ ಬಾಂದೇಕರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ಹಡಪದ ಸಮಾಜದ ಯುವ ಘಟಕದ ಅಧ್ಯಕ್ಷ ಸಂಗಮೇಶ್ ಹಾಗೂ ರವೀಂದ್ರ ಡಿಗ್ಗಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.





