ಬೀದರ್‌ನಲ್ಲಿ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

ಬೀದರ್ : ಜಿಲ್ಲೆಯಲ್ಲಿ ಸುಮಾರು ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.
ಗುರುವಾರ ಸಾಯಂಕಾಲ ಕೂಡ ಜೋರಾಗಿ ಮಳೆ ಸುರಿದಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸದಾ ಮೋಡ ಕವಿದ ವಾತಾವರಣವಿದೆ. ಜಿಟಿ ಜಿಟಿಯಾಗಿ ಮಳೆ ಸುರಿಯುತ್ತಿದ್ದು, ಕಲ್ಲಂಗಡಿ, ತರಕಾರಿ ಹಾಗೂ ಇತರ ಬೆಳೆಗಳು ನಾಶವಾಗುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ನಗರದಲ್ಲಿ ಚರಂಡಿಗಳು ಸ್ವಚ್ಛಗೊಳಿಸದ ಕಾರಣ ಮಳೆ ನೀರು ಸಂಪೂರ್ಣವಾಗಿ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದಾಗಿ ಸಾರ್ವಜನಿಕ ಓಡಾಟಕ್ಕೆ ತೊಂದರೆಯಾಗುತ್ತಿದೆ. ಹಳೆ ಬಸ್ ನಿಲ್ದಾಣದಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದೆ.
Next Story





