Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್ | ವಾರ್ತಾಭಾರತಿಯ ವರದಿಗೆ ಸಿಎಂ...

ಹುಲಸೂರ್ | ವಾರ್ತಾಭಾರತಿಯ ವರದಿಗೆ ಸಿಎಂ ಕಚೇರಿಯಿಂದ ಸ್ಪಂದನೆ : ಅಂಗನವಾಡಿ ಶೌಚಾಲಯ ದುರಸ್ತಿಗೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ3 Jun 2026 8:16 PM IST
share
ಹುಲಸೂರ್ | ವಾರ್ತಾಭಾರತಿಯ ವರದಿಗೆ ಸಿಎಂ ಕಚೇರಿಯಿಂದ ಸ್ಪಂದನೆ : ಅಂಗನವಾಡಿ ಶೌಚಾಲಯ ದುರಸ್ತಿಗೆ ಕ್ರಮ

ಹುಲಸೂರ್: ಕೇಸರ ಜವಳಗಾ ಗ್ರಾಮದ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಮೇ. 7ರಂದು ಪ್ರಕಟವಾದ ವರದಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ಪಂದನೆ ದೊರೆತಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೇಸರ ಜವಳಗಾ ಗ್ರಾಮದ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯ; ಶೌಚಕ್ಕೆ ಬಯಲೇ ಗತಿ’ ಎಂಬ ಶೀರ್ಷಿಕೆಯಡಿ ಪ್ರಕಟವಾದ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ಜಿಲ್ಲಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಭಾಲ್ಕಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೇಸರ ಜವಳಗಾ ಗ್ರಾಮದ ಎ ಹಾಗೂ ಬಿ ಅಂಗನವಾಡಿ ಕೇಂದ್ರಗಳ ಶೌಚಾಲಯಗಳು ಮಳೆ ಹಾಗೂ ಸಾರ್ವಜನಿಕರ ಬಳಕೆಯಿಂದ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.

2026-27ನೇ ಸಾಲಿನ ಅನುದಾನದಲ್ಲಿ ಶೌಚಾಲಯ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳಿಗೆ ಮೀಸಲು ಕಲ್ಪಿಸಲಾಗಿದ್ದು, ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಸಮಸ್ಯೆಯನ್ನು ಬೆಳಕಿಗೆ ತಂದ ವರದಿ ಬಳಿಕ ಅಧಿಕಾರಿಗಳು ಸ್ಪಂದಿಸಿರುವುದಕ್ಕೆ ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಘೋಷಿತ ಕಾಮಗಾರಿಗಳು ಶೀಘ್ರ ಕಾರ್ಯರೂಪಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ.

Tags

Vartha BharatiHulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X