ಹುಲಸೂರ್ | ಕ್ರೂಸರ್ ವಾಹನ ಪಲ್ಟಿ : ವ್ಯಕ್ತಿ ಮೃತ್ಯು

ಹುಲಸೂರ್ : ಕ್ರೂಸರ್ ವಾಹನ ಪಲ್ಟಿಯಾದ ಪರಿಣಾಮ ಮಹಾರಾಷ್ಟ್ರ ಮೂಲದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಲಸೂರ ತಾಲೂಕಿನ ಹಣಮಂತವಾಡಿ ಗ್ರಾಮದ ಹತ್ತಿರ ಶುಕ್ರವಾರ ಸಂಜೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ರಾಜ್ಯದ ನಿಲಂಗಾ ಗ್ರಾಮದ ನಿವಾಸಿ ಸಂದೀಪ್ ವಡಕಲೆ (35) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಬುಧವಾರ ಸಂಜೆ ಸುಮಾರು 7 ಗಂಟೆ ಸುಮಾರಿಗೆ ಬಸವಕಲ್ಯಾಣದಿಂದ ಶಾಹಜಾನಿ ಕಡೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಹಣಮಂತವಾಡಿ ಗ್ರಾಮ ವ್ಯಾಪ್ತಿಯಲ್ಲಿ ಸಾಗುತ್ತಿದ್ದಾಗ, ವಾಹನದ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ಸಂದೀಪ್ ವಡಕಲೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಂದೀಪ್ ಅವರು ಕಲಬುರಗಿಯಲ್ಲಿ ತಮ್ಮ ಮನೆಯ ಕುಟುಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಿಲಂಗಾ ಕಡೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ವಾಹನದ ಚಾಲಕ ಗಂಭೀರವಾಗಿ ಗಾಯಗೊಂಡು ಮಹಾರಾಷ್ಟ್ರದ ಲಾತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತರ ಪ್ರಯಾಣಿಕರಿಗೆ ಸಣ್ಣಗುಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಸಂಬಂಧ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.





