ಹುಲಸೂರ್ | ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಹುಲಸೂರ್ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಲಸೂರ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಶುಕ್ರವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ತಾಲ್ಲೂಕು ಅಧ್ಯಕ್ಷರಾಗಿ ರಾಜಪ್ಪ ನಂದೊಡೆ ಅವರು ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾದರು.
ನೂತನ ಪದಾಧಿಕಾರಿಗಳಿಗೆ ಚುನಾವಣಾ ಅಧಿಕಾರಿ ಅಶೋಕ್ ರೆಡ್ಡಿ ನಿಂಗಾವರೆ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಮಾಣಿಕಪ್ಪ ಸಂಗನಬಟ್ಟೆ ಪ್ರಶಸ್ತಿ ಪತ್ರ ವಿತರಿಸಿ ಸನ್ಮಾನಿಸಿದರು.
Next Story




