ಹುಲಸೂರ್ | ಎಸ್‌ಐಆರ್ ಫಾರ್ಮ್‌ಗಳನ್ನು ಶೀಘ್ರ ಭರ್ತಿ ಮಾಡಿ ಸಲ್ಲಿಸಿ: ತಹಶೀಲ್ದಾರ್ ಶಿವಾನಂದ್ ಮೇತ್ರೆ

ಹುಲಸೂರ್ : ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ವಿತರಿಸಲಾಗುತ್ತಿರುವ ಎನ್ಯುಮರೇಶನ್ ಫಾರ್ಮ್‌ಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ಭರ್ತಿ ಮಾಡಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸುವಂತೆ ತಹಸೀಲ್ದಾರ್ ಶಿವಾನಂದ್ ಮೇತ್ರೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
ಪಟ್ಟಣದ ಭೀಮನಗರ ಓಣೆಯಲ್ಲಿ ಶನಿವಾರ ಎಸ್‌ಐಆರ್ ಎನ್ಯುಮರೇಶನ್ ಫಾರ್ಮ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹುಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾರಾಣಿ ಭೋಸಲೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಾಲುಬಾಯಿ ಬನಸೋಡೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ರಾಮರಾವ್ ಮೋರೆ ಮತ್ತು ಶರಣು ಪವಾಡಶೆಟ್ಟಿ, ಗ್ರಾಮ ಲೆಕ್ಕಿಗ ನಾಗರಾಜ್ ವಂದನಕರ್, ವಿದ್ಯಾಸಾಗರ್ ಬನಸೋಡೆ, ಸಂಭಾಜಿ ಗವಾರೆ, ಡಾ. ಧರ್ಮೇಂದ್ರ ಭೋಸಲೆ, ವಿಶಾಲ್ ವಾಘಮಾರೆ ಹಾಗೂ ಸಿದ್ದು ಇಂಚುರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




