Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪೊಲೀಸರ ಭದ್ರತೆಯಲ್ಲಿ ಹುಲಸೂರು ಗ್ರಾಪಂ...

ಪೊಲೀಸರ ಭದ್ರತೆಯಲ್ಲಿ ಹುಲಸೂರು ಗ್ರಾಪಂ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ11 Aug 2026 8:25 PM IST
share
ಪೊಲೀಸರ ಭದ್ರತೆಯಲ್ಲಿ ಹುಲಸೂರು ಗ್ರಾಪಂ ಸಾಮಾನ್ಯ ಸಭೆ
ಮೂಲಸೌಕರ್ಯಗಳ ನಿರ್ಲಕ್ಷ್ಯಕ್ಕೆ ಸದಸ್ಯರ ಕಿಡಿ; ಪಿಡಿಒ ವಿರುದ್ಧ ಅಸಮಾಧಾನ

ಹುಲಸೂರು: ವಿವಿಧ ಮೂಲಸೌಕರ್ಯ ಸಮಸ್ಯೆಗಳು ಹಾಗೂ ಪಂಚಾಯಿತಿ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಹುಲಸೂರು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಮಂಗಳವಾರ ಪೊಲೀಸರ ಬಂದೋಬಸ್ತ್‌ನಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾರಾಣಿ ಬೋಸ್ಲೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮೀರಾಬಾಯಿ ಗಾಯಕವಾಡ್ ಹಾಗೂ ಪಿಡಿಒ ವಿನಯಕುಮಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ಕುಡಿಯುವ ನೀರು, ಚರಂಡಿ, ಬೀದಿ ದೀಪ, ವಿಕಲಚೇತನರ ಭವನ, 15ನೇ ಹಣಕಾಸು ನಿಧಿ, ರಸ್ತೆ ದುರಸ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸದಸ್ಯರು ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರು.

ವಾರ್ಡ್‌ 6ರಲ್ಲಿ ಕಳೆದ ಐದು ತಿಂಗಳಿಂದ ಶುದ್ಧ ಕುಡಿಯುವ ನೀರಿನ ಘಟಕದ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು. ಪಂಚಾಯಿತಿಯ ಬಿಲ್ ಕಲೆಕ್ಟರ್ ನಿವೃತ್ತರಾಗಿರುವುದರಿಂದ ಹುದ್ದೆ ಖಾಲಿಯಾಗಿದೆ. ಹುದ್ದೆ ಭರ್ತಿಗೆ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ವಾರ್ಡ್‌ಗಳಲ್ಲೂ ಬೀದಿ ದೀಪಗಳ ಬಲ್ಬ್‌ಗಳ ಕೊರತೆಯಿದ್ದು, ಸುಮಾರು 800 ಬಲ್ಬ್‌ಗಳ ಅಗತ್ಯವಿದೆ. 15ನೇ ಹಣಕಾಸು ನಿಧಿಯಡಿ ಬಲ್ಬ್‌ಗಳನ್ನು ಖರೀದಿಸಿ ಅಳವಡಿಸುವುದರ ಜತೆಗೆ ಬಿಲ್ ಪಾವತಿಗೂ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಹೇಳಿದರು.

ದಾಖಲೆ ನೀಡದಿರುವುದಕ್ಕೆ ಆಕ್ಷೇಪ :

15ನೇ ಹಣಕಾಸು ನಿಧಿಗೆ ಸಂಬಂಧಿಸಿದ ದಾಖಲೆಗಳನ್ನು ಸದಸ್ಯರು ಕೇಳಿದಾಗ ಸಮರ್ಪಕ ಮಾಹಿತಿ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತವಾಯಿತು. ಈ ವಿಚಾರದಲ್ಲಿ ಸದಸ್ಯರು ಹಾಗೂ ಪಿಡಿಒ ನಡುವೆ ಮಾತಿನ ಚಕಮಕಿ ನಡೆಯಿತು. ಪಂಚಾಯಿತಿಯ ಹಣಕಾಸು ವ್ಯವಹಾರಗಳು ಹಾಗೂ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸದಸ್ಯರಿಗೆ ಒದಗಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

ವಾರ್ಡ್‌ಗಳಲ್ಲಿ ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಸದಸ್ಯರು ಪ್ರಸ್ತಾಪಿಸಿದಾಗ, ಅನುದಾನದ ಕೊರತೆಯಿದೆ ಎಂದು ಪಿಡಿಒ ಉತ್ತರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಅನುದಾನಕ್ಕಾಗಿ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಕಳಪೆ ಕಾಮಗಾರಿ ಆರೋಪ :

ಜೆಜೆಎಂ ಯೋಜನೆಯಡಿ ನಡೆದ ಕೆಲವು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ರಸ್ತೆಗಳು ಹಾಳಾಗಿದ್ದು, ರಸ್ತೆ ದುರಸ್ತಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಕಳಪೆ ಕಾಮಗಾರಿಗಳ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.

Tags

Hulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X