Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್ | ಪತ್ರಿಕೋದ್ಯಮ ಸಮಾಜದ...

ಹುಲಸೂರ್ | ಪತ್ರಿಕೋದ್ಯಮ ಸಮಾಜದ ಅಭಿವೃದ್ಧಿಗೆ ಪೂರಕ ಶಕ್ತಿ: ಇಒ ಮಹಾದೇವ್ ಜಮ್ಮು

ವಾರ್ತಾಭಾರತಿವಾರ್ತಾಭಾರತಿ4 July 2026 7:05 PM IST
share
ಹುಲಸೂರ್ | ಪತ್ರಿಕೋದ್ಯಮ ಸಮಾಜದ ಅಭಿವೃದ್ಧಿಗೆ ಪೂರಕ ಶಕ್ತಿ: ಇಒ ಮಹಾದೇವ್ ಜಮ್ಮು
ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಹುಲಸೂರ್, ಜು.4: ಪತ್ರಿಕೋದ್ಯಮವು ಸಮಾಜದ ಅಭಿವೃದ್ಧಿಗೆ ಪೂರಕವಾದ ಶಕ್ತಿಯಾಗಿದ್ದು, ಜನರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ್ ಜಮ್ಮು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹುಲಸೂರ್ ಘಟಕದ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಅಂಗವಾಗಿ ಕಾರ್ಯನಿರತ ಪತ್ರಕರ್ತರ ಸನ್ಮಾನ ಹಾಗೂ ಹುಲಸೂರ್ ಮತ್ತು ಬಸವಕಲ್ಯಾಣ ತಾಲೂಕಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯುತ ವರದಿಗಾರಿಕೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ನಾಗರಾಜ್ ಹಾವಣ್ಣ ಮಾತನಾಡಿ, ಪತ್ರಿಕಾ ದಿನಾಚರಣೆ ಸಮಾಜಕ್ಕಾಗಿ ದುಡಿಯುವ ಪತ್ರಕರ್ತರ ಸೇವೆಯನ್ನು ಗೌರವಿಸುವ ದಿನವಾಗಿದೆ. ಸರ್ಕಾರಿ ನೌಕರರು ಮತ್ತು ಪತ್ರಕರ್ತರು ಸಮಾಜದ ಹಿತದೃಷ್ಟಿಯಿಂದ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರ್ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಮೆಂಟೇ ಮಾತನಾಡಿ, ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮವನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬ ಪತ್ರಕರ್ತನ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಬಸವಕುಮಾರ್ ಕವಟೆ ಮಾತನಾಡಿ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡೂ ಸಮಾಜದ ಜಾಗೃತಿಗೆ ಪೂರಕವಾಗಿದ್ದು, ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಯಲ್ಲಿ ಪತ್ರಿಕೆಗಳ ಕೊಡುಗೆ ಅನನ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಹುಲಸೂರ್ ಹಾಗೂ ಬಸವಕಲ್ಯಾಣ ತಾಲೂಕಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉದಯಕುಮಾರ್ ಮೂಳೆ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಹರಿನಾಥ್ ಪಾಟೀಲ್, ಖಜಾಂಚಿ ಪುಷ್ಪ ಪಾಟೀಲ್, ಉಪಾಧ್ಯಕ್ಷೆ ಶಾಲೂಬಾಯಿ ಪಾಟೀಲ್, ಖಜಾಂಚಿ ದೇವಿಂದ್ರ ಪಟ್ನೆ, ಮೀನಾಕ್ಷಿ ಬಿರಾದಾರ್, ಅನಿತಾ, ಶಕೀಲಾ ಬಾನು, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಸವಕಲ್ಯಾಣ ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನವೀರ್ ಶಿಂಧೆ, ಪತ್ರಕರ್ತರಾದ ನಾಗಪ್ಪ ನಿಣ್ಣೆ, ಕಲ್ಯಾಣರಾವ್ ಮದಳಗಾಂವ್ಕರ್, ಡಿ.ಕೆ. ಪ್ರಲ್ಹಾದ್, ಸತೀಶ್ ಹೊಸಮನಿ, ಸುಧಾಕರ್ ಸೂರ್ಯವಂಶಿ, ಸಂತೋಷ್ ಅಕ್ಕನ, ಜಗದೀಶ್,‌ ವೀರಶೆಟ್ಟಿ ಕರಕಲ್ಲೆ, ಅಶೋಕ್ ಪಾಟೀಲ್, ದತ್ತಾತ್ರೇಯ ಸ್ವಾಮಿ ಹಾಗೂ ದತ್ತಾತ್ರೇಯ ಸಾಬನೆ ಸೇರಿದಂತೆ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು. ಸರ್ಕಾರಿ ನೌಕರರ ಸಂಘದ ಪರಿಷತ್ ಸದಸ್ಯ ಭೀಮಾಶಂಕರ್ ಅದೆಪ್ಪಾ ನಿರೂಪಿಸಿದರು. ಶಿಕ್ಷಕ ರಾಜಕುಮಾರ್ ಮೆಹಕರೆ ಸ್ವಾಗತಿಸಿದರು. ಪ್ರೌಢಶಾಲಾ ಶಿಕ್ಷಕ ದೇವಿಂದ್ರ ನಂಜವಾಡೆ ವಂದಿಸಿದರು.‌

Tags

journalismHulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X