Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರು | ಶರಣರು ಮರಣಕ್ಕೆ...

ಹುಲಸೂರು | ಶರಣರು ಮರಣಕ್ಕೆ ಹೆದರಿದವರಲ್ಲ, ಮರಣವನ್ನೇ ಮಹಾನವಮಿ ಎಂದವರು: ಪ್ರಭುದೇವ ಮಹಾಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 Oct 2026 8:27 PM IST
share
ಹುಲಸೂರು | ಶರಣರು ಮರಣಕ್ಕೆ ಹೆದರಿದವರಲ್ಲ, ಮರಣವನ್ನೇ ಮಹಾನವಮಿ ಎಂದವರು: ಪ್ರಭುದೇವ ಮಹಾಸ್ವಾಮಿ

ಹುಲಸೂರು: ಶರಣರು ಮರಣಕ್ಕೆ ಹೆದರಿದವರಲ್ಲ. ಮರಣವನ್ನೇ ಮಹಾನವಮಿ ಎಂದು ಅವರು ಸಾರಿದ್ದಾರೆ. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಶರಣರು ಕಲ್ಯಾಣ ತೊರೆದಿದ್ದು ಪ್ರಾಣರಕ್ಷಣೆಗಾಗಿ ಅಲ್ಲ, ವಚನ ಸಾಹಿತ್ಯದ ಸಂರಕ್ಷಣೆಗಾಗಿ ಎಂದು ಗೋರಟಾ ಲಿಂಗಾಯತ ಮಹಾಮಠದ ಪೀಠಾಧಿಪತಿ ಪ್ರಭುದೇವ ಮಹಾಸ್ವಾಮಿ ಹೇಳಿದರು.

ಗೋರಟಾದಲ್ಲಿ ನಡೆದ ‘ಮರಣವೇ ಮಹಾನವಮಿ ಕಲ್ಯಾಣ ಕ್ರಾಂತಿ ವಿಜಯೋತ್ಸವ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶರಣರ ತ್ಯಾಗ, ಬಲಿದಾನ ಹಾಗೂ ವಚನ ಸಾಹಿತ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಮಹಾಮಠದ ವತಿಯಿಂದ ಹತ್ತು ದಿನಗಳ ಕಾಲ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳಿಂದಲೇ ವಚನ ಚಿಂತನೆ, ಅನುಭಾವ, ವಚನ ಪಠಣ, ಗಾಯನ ಹಾಗೂ ನೃತ್ಯಗಳನ್ನು ಪ್ರಸ್ತುತಪಡಿಸುವ ಮೂಲಕ ಅವರಲ್ಲಿ ಸಂಸ್ಕಾರ ಮತ್ತು ತತ್ವಜ್ಞಾನ ಬೆಳೆಸಲಾಗುತ್ತಿದೆ. ವಚನ ಸಾಹಿತ್ಯದಲ್ಲಿನ ಮಾನವೀಯ ಮೌಲ್ಯಗಳನ್ನು ವಿಶ್ವಕ್ಕೆ ತಲುಪಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಅನುಭಾವ ನೀಡಿದ ಅನಿಮಿಷಾನಂದ ಸ್ವಾಮೀಜಿ ಮಾತನಾಡಿ, ಅಕ್ಕ ಅನ್ನಪೂರ್ಣತಾಯಿಯವರು ಹಾಕಿಕೊಟ್ಟ ಮಾರ್ಗದಲ್ಲಿ ಪ್ರಭುದೇವ ಮಹಾಸ್ವಾಮೀಜಿ ಮುನ್ನಡೆಯುತ್ತಿದ್ದಾರೆ. ಮಕ್ಕಳಲ್ಲಿ ಸಂಸ್ಕಾರ ಬಿತ್ತುವ ಇಂತಹ ಕಾರ್ಯಕ್ರಮಗಳು ಭವಿಷ್ಯದಲ್ಲಿ ವಚನ ತತ್ವಗಳನ್ನು ವಿಶ್ವಕ್ಕೆ ಪರಿಚಯಿಸುವ ಪೀಳಿಗೆಯನ್ನು ರೂಪಿಸಲಿವೆ ಎಂದು ನುಡಿದರು.

ಅನುಭಾವ ನೀಡಿದ ಸೃಜನ ಶರಣಬಸವ ಪೊಲೀಸ್ ಪಾಟೀಲ ಮಾತನಾಡಿ, ಪ್ರೀತಿಯ ಅಭಾವವೇ ಅಸಹ್ಯದ ಮೂಲ. ನಾನೇ ಶ್ರೇಷ್ಠ, ನನ್ನದೇ ಪವಿತ್ರ ಎಂಬ ಅಹಂಕಾರದಿಂದ ಇತರರನ್ನು ಕೀಳಾಗಿ ಕಾಣುವ ಮನೋಭಾವ ಬೆಳೆಯುತ್ತದೆ. ಮಗು ಕೊಳಕಾಗಿದ್ದರೂ ತಾಯಿ ಅಸಹ್ಯಪಡದೆ ಪ್ರೀತಿಯಿಂದ ಬೆಳೆಸುತ್ತಾಳೆ. ಅದೇ ರೀತಿ ಎಲ್ಲರನ್ನೂ ಪ್ರೀತಿಯಿಂದ ಕಾಣಬೇಕು. ಅಸಹ್ಯಪಡುವುದು ಪರೋಕ್ಷವಾಗಿ ಅಪಮಾನ ಮಾಡಿದಂತೆಯೇ ಆಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುನಾಥಪ್ಪ ಹತ್ತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪೂಜಾ ಗೌರೆ, ರಮೇಶ್ ಪತಂಗೆ, ಜ್ಯೋತಿ ಪೊ. ಪಾಟೀಲ್, ಸುರೇಖಾ ರಾಜೋಳೆ, ಸುಲಭಾ ಮದಕಟ್ಟೆ, ನೀಲಾಂಬಿಕಾ ಪತಂಗೆ, ಮಹಾದೇವಿ ಕನಕಟ್ಟೆ ಹಾಗೂ ಶೃತಿ ರಾಜೋಳೆ ಉಪಸ್ಥಿತರಿದ್ದರು.

ಅಪೂರ್ವ ರವಿ ಕಾದೇಪೂರಿ ನಿರೂಪಿಸಿದರು. ರುದ್ರಾಕ್ಷ ಬಿರಾದರ ವಚನ ಗಾಯನ ಮಾಡಿದರು. ಪೊ. ಪಾಟೀಲ್ ಪ್ರಾರ್ಥಿಸಿದರು. ಅಂಬಿಕಾ ದಿಲಿಪ ವಚನ ಪಠಣ ಮಾಡಿದರು. ಸಿದ್ದೇಶ್ವರಿ ಭದ್ರಪ್ಪ ಸ್ವಾಗತಿಸಿದರು. ವಚನಶ್ರೀ ಮತ್ತು ಸ್ನೇಹ ವಚನ ನೃತ್ಯ ಪ್ರದರ್ಶಿಸಿದರು. ಗೌರಮ್ಮ ಪತಂಗೆ ಭಕ್ತಿ ದಾಸೋಹದ ವ್ಯವಸ್ಥೆ ಮಾಡಿದರು.

Tags

Hulasuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X