Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಬಸ್...

ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ7 Jun 2026 4:03 PM IST
share
ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಮನವಿ

ಹುಮನಾಬಾದ್: ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಡಿಎಸ್ಎಸ್ (ಅಂಬೇಡ್ಕರ್‌ವಾದ) ಸಂಘಟನೆ ಆಗ್ರಹಿಸಿದೆ.

ಈ ಕುರಿತು ಹುಮನಾಬಾದ್ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿರುವ ಸಂಘಟನೆ, ಗ್ರಾಮಕ್ಕೆ ನಿಯಮಿತ ಬಸ್ ಸೇವೆ ಇಲ್ಲದ ಕಾರಣ ವಿದ್ಯಾರ್ಥಿಗಳು, ರೈತರು, ಉದ್ಯೋಗಸ್ಥರು ಹಾಗೂ ಸಾರ್ವಜನಿಕರು ದಿನನಿತ್ಯ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದೆ.

ಶಾಲೆ-ಕಾಲೇಜು, ಆಸ್ಪತ್ರೆ ಹಾಗೂ ಸರ್ಕಾರಿ ಕಚೇರಿಗಳಿಗೆ ತೆರಳುವವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ಚಿತ್ತಕೋಟಾ ಗ್ರಾಮಕ್ಕೆ ಪ್ರತಿದಿನ ನಿಯಮಿತ ಹಾಗೂ ನಿಗದಿತ ವೇಳಾಪಟ್ಟಿಯ ಬಸ್ ಸೇವೆ ಆರಂಭಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಗ್ರಾಮಕ್ಕೆ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಉದ್ಯೋಗಸ್ಥರು ಕೆಲಸದ ಸ್ಥಳಗಳಿಗೆ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಸಂಘಟನೆ ತಿಳಿಸಿದೆ.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿದ್ದರೂ, ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್‌ಗಳೇ ಬಾರದಿದ್ದರೆ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುವುದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಡಿಎಸ್ಎಸ್ ಮುಖಂಡರು ಹೇಳಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಆರಂಭಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿಎಸ್ಎಸ್ ತಾಲೂಕು ಸಂಚಾಲಕ ರಾಹುಲ್ ಉದ್ದಾ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದಾರ್ಥ್ ಕಾಂಬಳೆ, ವಿದ್ಯಾಸಾಗರ್ ಸಾದನೂರ್, ಅಲಿಸಾಬ್ ಮಚಕೂರಿ, ರೇವಪ್ಪ ಡಾಗೆ, ಭೀಮರಾವ್ ಹಂಗರಗಿ, ಭಾರತಬಾಯಿ, ಸುವರ್ಣಾ, ಭೀಮಣ್ಣ ಡಾಗೆ, ಮಲ್ಲಮ್ಮ, ಶಾರದಬಾಯಿ, ಜಗದೇವಿ, ಶಶಿಕಲಾ, ಕಾಶಾಮ್ಮ ಹಾಗೂ ಗೀತಾಬಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Humanabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X