Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ರುಕ್ಕುದ್ದೀನ್ ಇಸ್ಲಾಂಪುರ್...

ಹುಮನಾಬಾದ್ | ರುಕ್ಕುದ್ದೀನ್ ಇಸ್ಲಾಂಪುರ್ ಸಮಾಜದ ಬಹುದೊಡ್ಡ ಆಸ್ತಿ: ರಾಜೇಂದ್ರ ಜಾಧವ್

ವಾರ್ತಾಭಾರತಿವಾರ್ತಾಭಾರತಿ17 Aug 2026 8:23 PM IST
share
ಹುಮನಾಬಾದ್ | ರುಕ್ಕುದ್ದೀನ್ ಇಸ್ಲಾಂಪುರ್ ಸಮಾಜದ ಬಹುದೊಡ್ಡ ಆಸ್ತಿ: ರಾಜೇಂದ್ರ ಜಾಧವ್
‘ಸೌಹಾರ್ದತೆ ಸಂತ’ ಕವನ ಸಂಕಲನ ಬಿಡುಗಡೆ

ಹುಮನಾಬಾದ್: ಜಾತ್ಯತೀತ ಮನೋಭಾವ ಹೊಂದಿದ್ದ ಹಿರಿಯ ಸಾಹಿತಿ ರುಕ್ಕುದ್ದೀನ್ ಇಸ್ಲಾಂಪುರ್ ಅವರು ತಮ್ಮ ಬರಹಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದರು. ಅವರು ಸಮಾಜದ ಬಹುದೊಡ್ಡ ಆಸ್ತಿಯಾಗಿದ್ದರು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಬಿ. ಜಾಧವ್ ಹೇಳಿದರು.

ನಗರದ ಲಾಲಧರಿ ಆಶ್ರಮದಲ್ಲಿ ರವಿವಾರ ರುಕ್ಕುದ್ದೀನ್ ಇಸ್ಲಾಂಪುರ್ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ‘ಸೌಹಾರ್ದತೆ ಸಂತ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾರಿಗೆ ಇಲಾಖೆಯಲ್ಲಿ ನಿರ್ವಾಹಕ, ಸಂಚಾರಿ ನಿಯಂತ್ರಕ ಹಾಗೂ ಸಂಚಾರಿ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಇಸ್ಲಾಂಪುರ್ ಅವರು ನಿಷ್ಠೆ, ಶಿಸ್ತು, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಎಲ್ಲರಿಗೂ ಆದರ್ಶರಾಗಿದ್ದರು. ಮನುಷ್ಯತ್ವಕ್ಕೆ ಮಾದರಿಯಾಗಿದ್ದ ಅವರ ಬದುಕು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದರು.

ಪುಸ್ತಕ ಪರಿಚಯ ಮಾಡಿದ ಬಸವರಾಜ ಮಯೂರ್, ಇಸ್ಲಾಂಪುರ್ ಅವರು ಬಹುತ್ವ ಭಾರತ ನಿರ್ಮಾಣಕ್ಕೆ ಅಗತ್ಯವಾದ ಮೌಲ್ಯಗಳನ್ನು ಪ್ರತಿಪಾದಿಸುವ ಸಾಹಿತ್ಯ ರಚಿಸಿದ್ದಾರೆ. ಅಪ್ಪಟ ದೇಶಪ್ರೇಮಿಯಾಗಿದ್ದ ಅವರು ಬೀದರ್ ಜಿಲ್ಲೆಯಲ್ಲಿ ಸೌಹಾರ್ದತೆಯ ಸಂತನಾಗಿ, ಸಾಮರಸ್ಯದ ಬದುಕಿಗೆ ಸಾಹಿತ್ಯದ ಮೂಲಕ ಬೆಳಕು ತೋರಿಸಿದ್ದಾರೆ ಎಂದರು.

84 ಕವಿಗಳು ತಮ್ಮ ವಿಭಿನ್ನ ಕಾವ್ಯ ಶೈಲಿಯ ಮೂಲಕ ಇಸ್ಲಾಂಪುರ್ ಅವರ ಸಾಹಿತ್ಯ, ಸಾಧನೆ ಹಾಗೂ ಸೇವೆಯನ್ನು ದಾಖಲಿಸಿರುವುದು ‘ಸೌಹಾರ್ದತೆ ಸಂತ’ ಸಂಕಲನದ ವಿಶೇಷತೆ ಎಂದು ತಿಳಿಸಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ್ ಅತಿವಾಳೆ ಮಾತನಾಡಿ, ಜಾತ್ಯತೀತ ಮನೋಭಾವ ಹೊಂದಿದ್ದ ಇಸ್ಲಾಂಪುರ್ ಅವರು ಕಥೆ, ಕಾದಂಬರಿ ಹಾಗೂ ವ್ಯಕ್ತಿಚಿತ್ರಣಗಳ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಅವರ ಸಾಹಿತ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಮಾಡುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದರು.

ಸಂಕಲನದ ಸಂಪಾದಕ ರಮೇಶ್ ಬಿರಾದಾರ್ ಮಾತನಾಡಿ, ವೃತ್ತಿ ಜೀವನದ ಜವಾಬ್ದಾರಿಗಳೊಂದಿಗೆ ಕುಟುಂಬದ ಏಳಿಗೆಗೆ ಶ್ರಮಿಸುತ್ತಲೇ ಸಾಹಿತ್ಯ ಕ್ಷೇತ್ರದಲ್ಲೂ ಸಾಧನೆ ಮಾಡಿದ ರುಕ್ಕುದ್ದೀನ್ ಇಸ್ಲಾಂಪುರ್ ಅವರನ್ನು ಈ ಕೃತಿಯ ಮೂಲಕ ಸ್ಮರಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಣಿಕರೆಡ್ಡಿ ಇಸ್ಲಾಂಪುರ್‌, ಯೋಜನಾ ನಿರ್ದೇಶಕ ಲಕ್ಷ್ಮಿಕಾಂತ್ ಅವಲಿ, ತಹಸೀಲ್ದಾರ್ ಜಗದೀಶ್ ಎಸ್. ಚೌರ್, ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ, ಸಾಮಾಜಿಕ ಹೋರಾಟಗಾರ ಗುರುನಾಥ್ ವಡ್ಡೆ, ಸಾಹಿತಿಗಳಾದ ಶಕೀಲ್ ಐ.ಎಸ್, ಓಂಕಾರ್ ಉಪ್ಪೆ, ದಿ. ಇಸ್ಲಾಂಪುರ್ ಅವರ ಧರ್ಮಪತ್ನಿ ಸುಹೀಲಾ ತಪಸ್ಸುಮ್, ಮಕ್ಕಳಾದ ರೋಷನ್, ನೂರ್ ಸೇರಿದಂತೆ ಹಲವು ಸಾಹಿತಿಗಳು, ಕುಟುಂಬಸ್ಥರು ಮತ್ತು ಇತರರು ಭಾಗವಹಿಸಿದ್ದರು.

Tags

Humanabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X