Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಎಸ್‌ಐಆರ್ ನೆಪದಲ್ಲಿ ಕೋಮು...

ಹುಮನಾಬಾದ್ | ಎಸ್‌ಐಆರ್ ನೆಪದಲ್ಲಿ ಕೋಮು ಸೇಡಿನ ಸಂಚು ಆರೋಪ; ಡಿವೈಎಫ್‌ಐ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ವಜಾಗೊಳಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Oct 2026 8:00 PM IST
share
ಹುಮನಾಬಾದ್ | ಎಸ್‌ಐಆರ್ ನೆಪದಲ್ಲಿ ಕೋಮು ಸೇಡಿನ ಸಂಚು ಆರೋಪ; ಡಿವೈಎಫ್‌ಐ ಪ್ರತಿಭಟನೆ

ಹುಮನಾಬಾದ್: ಎಸ್‌ಐಆರ್ ನೆಪದಲ್ಲಿ ಕೋಮು ಸೇಡಿನ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿ ಡಿವೈಎಫ್‌ಐ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಜನರು ಈ ದೇಶದವರೇ ಎಂಬುದನ್ನು ಸಾಬೀತುಪಡಿಸುವಂತೆ ಸವಾಲು ಹಾಕಲಾಗುತ್ತಿದೆ ಎಂದು ಆರೋಪಿಸಿದರು. ಹತ್ತು ವರ್ಷಕ್ಕೊಮ್ಮೆ ನಡೆಯುತ್ತಿದ್ದ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಇದೀಗ ಎಸ್‌ಐಆರ್ ಹೆಸರಿನಲ್ಲಿ ಬದಲಾವಣೆ ಮಾಡಲು ಹೊರಟಿದ್ದು, ಈ ಹಿಂದೆ ಬಿಜೆಪಿಗೆ ಮತ ಹಾಕದವರ ಹೆಸರುಗಳನ್ನು ತೆಗೆದುಹಾಕುವ ದೊಡ್ಡ ಷಡ್ಯಂತ್ರವಿದೆ ಎಂದು ದೂರಿದರು.

ಬೀದರ್ ಜಿಲ್ಲೆ ಮಾತ್ರವಲ್ಲದೆ ಇಡೀ ದೇಶದಲ್ಲಿ ಫಾರಂ ನಂಬರ್-7 ತುಂಬಿಸುವ ಮೂಲಕ ಮುಸ್ಲಿಂ ಸಮುದಾಯದ ನೂರಾರು ಜನರ ಹೆಸರುಗಳನ್ನು ‘ಇವರು ಸ್ಥಳೀಯರಲ್ಲ’ ಎಂಬ ಕಾರಣ ನೀಡಿ ತಹಶೀಲ್ದಾರ್ ಮೂಲಕ ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಆಧಾರ್ ಇಲ್ಲದೆ ಫಾರಂ-7ರ ಮೂಲಕ ಹೆಸರು ಕೈಬಿಡುವಂತಿಲ್ಲ ಎಂದು ಕಾಯ್ದೆ ಹೇಳುತ್ತದೆ. ಆದರೂ ಸೂಕ್ತ ದಾಖಲೆಗಳಿಲ್ಲದೆ ನೂರಾರು ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗುತ್ತಿದೆ ಎಂದು ದೂರಿದರು.

ಇದರ ಹಿಂದೆ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆ. ನೀಲಾ ಆರೋಪಿಸಿದರು. ಕಳೆದ ಬಾರಿ ಮುದ್ರಣಗೊಂಡಿದ್ದ ಎರಡು ನಮೂನೆಯ ಫಾರಂ ನಂಬರ್-7ರ ಬಗ್ಗೆಯೂ ತನಿಖೆ ನಡೆಸಬೇಕು. ಯಾರು, ಎಲ್ಲಿ ಕುಳಿತು, ಯಾರ ಫೋನ್ ನಂಬರ್‌ನಿಂದ ಈ ಫಾರಂಗಳನ್ನು ತುಂಬಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಮಾಹಿತಿಯ ಪ್ರಕಾರ, ಫಾರಂ-7 ಅನ್ನು ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿನ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ ಅಥವಾ ಹೆಸರು ಅಳಿಸುವಿಕೆಗಾಗಿ ಬಳಸಲಾಗುತ್ತದೆ. ಎಸ್‌ಐಆರ್-2026ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಶೀಲನೆ ಮತ್ತು ಹಕ್ಕು-ಆಕ್ಷೇಪಣೆ ಸಲ್ಲಿಸಲು ಅಧಿಕೃತ ವ್ಯವಸ್ಥೆಯನ್ನು ಒದಗಿಸಿದೆ. (Voter Services)

ಪ್ರತಿಭಟನೆಯಲ್ಲಿ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯ ಶಶಿ ಡಾಂಗೆ, ಡಿವೈಎಫ್‌ಐ ಸಮಿತಿ ಸದಸ್ಯ ಪ್ರಜ್ಞಾ, ಕಾರ್ಮಿಕ ಸಂಘದ ಅಧ್ಯಕ್ಷ ಗೌಸೋದ್ದಿನ್, ಯುವರಾಜ್, ಭೀಮರೆಡ್ಡಿ, ಸಿಐಟಿಯು ಮುಖಂಡ ಪ್ರಭು ಸಂತೋಷಕರ್ ಸೇರಿದಂತೆ ಹಲವು ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

Tags

ProtestsDYFISIRHumnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X