Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್‌ | ವಿವಿಧ ಬೇಡಿಕೆಗಳ...

ಹುಮನಾಬಾದ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Oct 2026 7:37 PM IST
share
ಹುಮನಾಬಾದ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಹುಮನಾಬಾದ್‌: ಕಬ್ಬಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂದು ಆರೋಪಿಸಿ, ಕಬ್ಬಿನ ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಐಬಿಯಿಂದ ಪ್ರಮುಖ ರಸ್ತೆಗಳ ಮೂಲಕ ಪ್ರತಿಭಟನಾ ರ‍್ಯಾಲಿ ನಡೆಸಿದ ರೈತರು, ಹಳೇ ಆರ್‌ಟಿಒ ಚೆಕ್‌ಪೋಸ್ಟ್‌ ಬಳಿ ಹಾದುಹೋಗುವ ಹೈದರಾಬಾದ್‌–ಮುಂಬೈ ರಾಷ್ಟ್ರೀಯ ಹೆದ್ದಾರಿ-69 ಅನ್ನು ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿನ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಹೆದ್ದಾರಿ ತಡೆಯಿಂದಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಪ್ರತಿ ಟನ್‌ ಕಬ್ಬಿಗೆ ನ್ಯಾಯಯುತ ಬೆಲೆ ಸಿಗುವಂತೆ ಎಫ್‌ಆರ್‌ಪಿ ದರವನ್ನು 5,000 ರೂ. ಗೆ ನಿಗದಿಪಡಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (ಎಂಎಸ್‌ಪಿ) 6,000 ರೂ. ನಿಗದಿಗೊಳಿಸಬೇಕು. ಬರಗಾಲ ಪೀಡಿತ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಪ್ರತಿ ಹೆಕ್ಟೇರ್‌ಗೆ 50,000 ರೂ. ಬರ ಪರಿಹಾರ ನೀಡಬೇಕು. ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿ 10 ಗಂಟೆಗಳ ಕಾಲ ವಿದ್ಯುತ್‌ ಪೂರೈಸಬೇಕು. 2026ನೇ ಸಾಲಿನಲ್ಲಿ ಬೆಳೆ ವಿಮೆ ಪಾವತಿಸಿರುವ ರೈತರ ಖಾತೆಗಳಿಗೆ ವಿಮೆ ಹಣವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಾಡುಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ರೈತರಿಗೆ ಶೇ.90ರಷ್ಟು ರಿಯಾಯಿತಿಯಲ್ಲಿ ಸೋಲಾರ್‌ ಬೇಲಿಗಳನ್ನು ಅಳವಡಿಸಬೇಕು. ಸ್ವಾಮಿನಾಥನ್‌ ಆಯೋಗದ ವರದಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು, ಸಂಜೆವರೆಗೂ ಪ್ರತಿಭಟನೆ ಮುಂದುವರಿಸಿದರು. ಈ ವೇಳೆ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ರಸ್ತೆಯ ಬದಿಯಿಂದ ವಾಹನಗಳು ಸಂಚರಿಸಲು ವ್ಯವಸ್ಥೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸ್ಥಳಕ್ಕೆ ಆಗಮಿಸಿ ರೈತರ ಮನವಿ ಸ್ವೀಕರಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಜಿಲ್ಲಾಧಿಕಾರಿಗಳು ಒಂದು ವಾರದೊಳಗೆ ಕಂದಾಯ, ಜೆಸ್ಕಾಂ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ರೈತರ ಕುಂದುಕೊರತೆಗಳ ಕುರಿತು ಸಭೆ ನಡೆಸಬೇಕು. ಇಲ್ಲದಿದ್ದರೆ, ಮನ್ನಾಏಖೆಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಟೋಲ್‌ ಗೇಟ್‌ ಸೇರಿದಂತೆ ಜಿಲ್ಲೆಯ ಇತರ ಕಡೆಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್‌ ಸ್ವಾಮಿ, ಯುವ ಕ್ರಾಂತಿ ಸಂಘಟನೆಯ ರಾಜ್ಯಾಧ್ಯಕ್ಷ ಗುಂಡು ರೆಡ್ಡಿ ಕಮಲಾಪುರೆ, ಜೈ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯದರ್ಶಿ ನವೀನ್ ಬತ್ತಲಿ, ಭೀಮರೆಡ್ಡಿ ಸಿಂಧನಕೇರಾ, ಅರವಿಂದ್ ಜೋಗಿರೆ ಹಾಗೂ ಅರುಣ್ ಕಲ್ಲೂರ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

Tags

protestfarmersHumnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X