Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಕೈಗಾರಿಕಾ ಪ್ರದೇಶದಲ್ಲಿ...

ಹುಮನಾಬಾದ್ | ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯ ಬಿದ್ದು ಐವರು ಕಾರ್ಮಿಕರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ7 Sept 2026 7:31 PM IST
share
ಹುಮನಾಬಾದ್ | ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯ ಬಿದ್ದು ಐವರು ಕಾರ್ಮಿಕರಿಗೆ ಗಾಯ

ಹುಮನಾಬಾದ್ ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಬಜಾಜ್ ಕಾರ್ಖಾನೆಯಲ್ಲಿ ರಾಸಾಯನಿಕ ತ್ಯಾಜ್ಯ ಸೋರಿಕೆಯಾಗಿ ಐವರು ಕಾರ್ಮಿಕರು ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿವೆ.

ರವಿವಾರ ಸಂಜೆ ಕೆಲಸದ ವೇಳೆ ರಾಸಾಯನಿಕ ತ್ಯಾಜ್ಯ ಕಾರ್ಮಿಕರ ದೇಹದ ಮೇಲೆ ಬಿದ್ದ ಪರಿಣಾಮ ಐವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹುಮನಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಗಾಯಗೊಂಡವರಲ್ಲಿ ಮೂವರಿಗೆ ಭಾನುವಾರವೇ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಇಬ್ಬರನ್ನು 24 ಗಂಟೆಗಳ ಕಾಲ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಆ ಇಬ್ಬರನ್ನೂ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳಲ್ಲಿ ಪಶ್ಚಿಮ ಬಂಗಾಳ ಮೂಲದ ದೇಬು ಮುರಮು (24), ವಿಧಾನಾಷದಾ (19) ಸೇರಿದಂತೆ ಇತರ ಮೂವರು ಕಾರ್ಮಿಕರು ಸೇರಿದ್ದಾರೆ. ರಾಸಾಯನಿಕ ತ್ಯಾಜ್ಯ ತಗುಲಿದ ಪರಿಣಾಮ ಕೈ, ಮುಖ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಸುಟ್ಟ ಗಾಯಗಳಾಗಿವೆ.

ಈ ಘಟನೆ ಬಳಿಕ ಕಾರ್ಖಾನೆಯಲ್ಲಿ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬ ಪ್ರಶ್ನೆ ಗಂಭೀರವಾಗಿ ಕೇಳಿಬಂದಿದೆ. ಅಪಾಯಕಾರಿ ರಾಸಾಯನಿಕಗಳೊಂದಿಗೆ ಕೆಲಸ ಮಾಡುವ ಕಾರ್ಮಿಕರಿಗೆ ಸುರಕ್ಷತಾ ಸಾಧನಗಳು, ರಕ್ಷಣಾ ಕಿಟ್‌ಗಳು ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಸಮರ್ಪಕವಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಘಟನೆ ಹುಮನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರೂ, ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Tags

industrial areaHumnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X