Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಗುರುಗಂಗಾ ಹಳ್ಳಕ್ಕೆ...

ಹುಮನಾಬಾದ್ | ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ : ಬೃಹತ್ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ3 Aug 2026 4:50 PM IST
share
ಹುಮನಾಬಾದ್ | ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ : ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಹುಮನಾಬಾದ್: ಪವಿತ್ರ ಗುರುಗಂಗಾ ಹಳ್ಳಕ್ಕೆ ಅಕ್ರಮವಾಗಿ ಕೈಗಾರಿಕಾ ತ್ಯಾಜ್ಯ ಹರಿಸುತ್ತಿರುವುದನ್ನು ಖಂಡಿಸಿ ಹಾಗೂ ಮಾಲಿನ್ಯವನ್ನು ಶಾಶ್ವತವಾಗಿ ತಡೆಗಟ್ಟುವಂತೆ ಒತ್ತಾಯಿಸಿ ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಅಪಾರ ಸಂಖ್ಯೆಯ ಸಾರ್ವಜನಿಕರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಂದಿನ 72 ಗಂಟೆಯೊಳಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಮಾಲಿನ್ಯದಿಂದ ಬಾಧಿತವಾಗಿರುವ ಎಲ್ಲ ಗ್ರಾಮಗಳ ಜನರನ್ನು ಒಗ್ಗೂಡಿಸಿ ಬೃಹತ್ ಜನಾಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳು ಸಂಸ್ಕರಿಸದ ವಿಷಕಾರಿ ತ್ಯಾಜ್ಯವನ್ನು ಗುರುಗಂಗಾ ಹಳ್ಳಕ್ಕೆ ಹರಿಸುತ್ತಿರುವುದರಿಂದ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ತೈಲಯುಕ್ತ ಪದರ ನಿರ್ಮಾಣವಾಗಿ ಜಲಚರಗಳು ಸಾವಿಗೀಡಾಗುತ್ತಿವೆ. ಇದರಿಂದ ಪರಿಸರದ ಜೊತೆಗೆ ಸಾರ್ವಜನಿಕರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಲಿನ್ಯವು ಅಂತರ್ಜಲಕ್ಕೂ ವ್ಯಾಪಿಸಿದ್ದು, ಮಾಣಿಕನಗರ, ಹುಮನಾಬಾದ್, ಗಡವಂತಿ, ಮೊಳಕೇರಾ, ಧುಮ್ಮನಸೂರ್, ಹುಡಗಿ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಜನರ ಕುಡಿಯುವ ನೀರಿನ ಮೂಲ ಕಲುಷಿತಗೊಂಡಿದೆ. ಈ ನೀರನ್ನು ಬಳಸುವುದರಿಂದ ಚರ್ಮರೋಗ, ಜೀರ್ಣಾಂಗದ ಸೋಂಕು, ಮೂತ್ರಪಿಂಡ ಹಾನಿ, ನರಮಂಡಲದ ಸಮಸ್ಯೆಗಳು ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರತಿವರ್ಷ ಮಾಣಿಕನಗರ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತರು ಗುರುಗಂಗಾ ಹಾಗೂ ವಿರಜಾ ನದಿಗಳ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ಆ ನೀರನ್ನು ಪವಿತ್ರ ತೀರ್ಥವೆಂದು ಸ್ವೀಕರಿಸುತ್ತಾರೆ. ಕೈಗಾರಿಕಾ ತ್ಯಾಜ್ಯದಿಂದ ಈ ಪವಿತ್ರ ಜಲಮೂಲ ಕಲುಷಿತವಾಗಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಮಾಲಿನ್ಯಕ್ಕೆ ಕಾರಣವಾದ ಕೈಗಾರಿಕೆಗಳನ್ನು ಪತ್ತೆಹಚ್ಚಿ ಪರಿಸರ ಸಂರಕ್ಷಣಾ ಕಾನೂನುಗಳಡಿ ಕಠಿಣ ಕ್ರಮ ಜರುಗಿಸಬೇಕು. ಜೊತೆಗೆ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ತ್ಯಾಜ್ಯ ಸೇರುವುದನ್ನು ಶಾಶ್ವತವಾಗಿ ತಡೆಯಬೇಕು ಎಂದು ಒತ್ತಾಯಿಸಲಾಗಿದೆ.

ಮುಂದಿನ 72 ಗಂಟೆಯೊಳಗೆ ಸ್ಪಷ್ಟ ಹಾಗೂ ಪರಿಣಾಮಕಾರಿ ಕ್ರಮ ಕೈಗೊಳ್ಳದಿದ್ದರೆ ಬಾಧಿತ ಗ್ರಾಮಗಳ ಜನರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಎಚ್ಚರಿಕೆ ನೀಡಲಾಗಿದೆ.

ಪ್ರತಿಭಟನೆಯಲ್ಲಿ ಮಾಣಿಕಪ್ರಭು ಸಂಸ್ಥಾನದ ಕಾರ್ಯದರ್ಶಿ ಆನಂದರಾಜ್ ಪ್ರಭು‌, ಶಾಸಕ ಸಿದ್ದು ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಸೇರಿದಂತೆ ವಿವಿಧ ಗ್ರಾಮದ ಗ್ರಾಮಸ್ಥರು, ಹೋರಾಟಗಾರರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

protestHumnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X