ಹುಮನಾಬಾದ್ | ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ: ರಾಜಶೇಖರ ಪಾಟೀಲ್

ಹುಮನಾಬಾದ್: ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮವಹಿಸಬೇಕು ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಕರೆ ನೀಡಿದರು.
ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ವೈಯಕ್ತಿಕ ಪ್ರತಿಷ್ಠೆಗಾಗಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಪಕ್ಷದ ಬಲವರ್ಧನೆಗೆ ಪೂರಕವಾಗಿ ಪ್ರತಿಯೊಬ್ಬ ಕಾರ್ಯಕರ್ತರೂ ಕೆಲಸ ಮಾಡಬೇಕು. ಈ ಹಿಂದೆ ನಡೆದ ತಪ್ಪುಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಸಲಹೆ ನೀಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಬೂತ್ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರಮಿಯಾ, ಕೇಶವರಾವ್ ತಳಘಟ್ಕರ್, ಮಾಂತಯ್ಯಾ ತೀರ್ಥಾ, ನಾಗರಾಜ್ ಹಿಬಾರೆ, ಮಲ್ಲಿಕಾರ್ಜುನ್ ಪ್ರಭಾ, ಅಬ್ದುಲ್ ರಜಾಕ್, ಗೌಸ್ ರಾಜಾಭಾಯ್, ಯುಸೂಫ್ ಸೌದಾಗರ್, ವಿಜಯಕುಮಾರ್ ಶಹಾಪೂರಕರ್, ಸಂದೀಪ್ ಪ್ರಭಾ, ವಿಜಯಕುಮಾರ್ ಪೊಲೀಸ್ ಪಾಟೀಲ್, ವಿಜಯಕುಮಾರ್ ಜಗದಾಳೆ, ಪ್ರವೀಣ್ ಶಂಕೆ, ಮುಬೀನ್ ಸೌದಾಗರ್, ವೀರೇಶ್ ರೆಡ್ಡಿ, ದೇವರಾಜ್ ಪ್ರಭಾ, ರಾಜಕುಮಾರ್, ಚಾಂದ್ ಖುರೇಷಿ, ರವಿರೆಡ್ಡಿ ಸೇರಿದಂತೆ ಅನೇಕರಿದ್ದರು.






