Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಲೇಬರ್ ಕೋಡ್ ರದ್ದು...

ಹುಮನಾಬಾದ್ | ಲೇಬರ್ ಕೋಡ್ ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ16 Nov 2026 6:32 PM IST
share
ಹುಮನಾಬಾದ್ | ಲೇಬರ್ ಕೋಡ್ ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್: ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ವತಿಯಿಂದ ಶನಿವಾರ ನಗರದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಕುರಿತು ತಹಶೀಲ್ದಾರ್ ಮೂಲಕ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಲೇಬರ್ ಕೋಡ್‌ನಿಂದ 50 ಲಕ್ಷ ರೂ.ಗಿಂತ ಕಡಿಮೆ ವೆಚ್ಚದ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕರು ಕಲ್ಯಾಣ ಮಂಡಳಿಯ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಈ ಲೇಬರ್ ಕೋಡ್ ಜಾರಿಗೊಳಿಸಬಾರದು ಎಂದು ಒತ್ತಾಯಿಸಲಾಗಿದೆ.

ಕಲ್ಯಾಣ ಮಂಡಳಿಯಿಂದ ಡಿಬಿಟಿ ಆಧಾರಿತ ಶೈಕ್ಷಣಿಕ ನೆರವು ಹಾಗೂ ಪಿಂಚಣಿ ಯೋಜನೆಗಳಿಗೆ ಅನುದಾನ ಕಡಿತಗೊಳಿಸಲಾಗುತ್ತಿದೆ. ಮತ್ತೊಂದೆಡೆ, ಕಮಿಷನ್‌ಗಾಗಿ ಕಳಪೆ ಗುಣಮಟ್ಟದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. 2021ರಲ್ಲಿ 717 ಕೋಟಿ ರೂ. ಇದ್ದ ಶೈಕ್ಷಣಿಕ ನೆರವು 2025-26ನೇ ಸಾಲಿನಲ್ಲಿ 148 ಕೋಟಿ ರೂ.ಗೆ ಇಳಿಕೆಯಾಗಿದೆ. ಅಲ್ಲದೆ, 8.33 ಲಕ್ಷ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಆದ್ದರಿಂದ ಕಿಟ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಿ, ಡಿಬಿಟಿ ಯೋಜನೆಯನ್ನು ಮುಂದುವರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮೆಸನ್ ಹಾಗೂ ಎಲೆಕ್ಟ್ರೀಷಿಯನ್ ಕಿಟ್‌ಗಳು ಮೂರು ದಿನಗಳೂ ಬಾಳಿಕೆ ಬರುತ್ತಿಲ್ಲ. ವೈದ್ಯಕೀಯ ತಪಾಸಣೆಯ ಹೆಸರಿನಲ್ಲಿ 800 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಸಂಘಟನೆ, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಶೈಕ್ಷಣಿಕ ಸಹಾಯಧನವನ್ನು 5 ಸಾವಿರ ರೂ.ಗಳಿಂದ 50 ಸಾವಿರ ರೂ.ವರೆಗೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ಬಸವರಾಜ್ ಮಾಳಗೆ ಗಡವಂತಿ, ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷ ಗೌಸೋದ್ದೀನ್, ಕಾರ್ಯದರ್ಶಿ ಶಶಿಕಾಂತ್ ಡಾಂಗೆ, ಶ್ರೀಮಂತ್ ಮೇತ್ರೆ, ಈಶ್ವರ್ ಕ್ರಾಂತಿ, ಸೀಮನ್, ರಾಜಕುಮಾರ್, ಉಮೇಶ್ ಹಾಗೂ ನಬಿಸಾಬ್ ಸೇರಿದಂತೆ ಹಲವಾರು ಕಾರ್ಮಿಕರು ಪಾಲ್ಗೊಂಡಿದ್ದರು.

Tags

labour codesprotestHumnabad
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X