Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಘಟಕ,...

ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಘಟಕ, ಮಹಿಳೆಯರಿಗಾಗಿ ಸರಕಾರಿ ಐವಿಎಫ್ ಕೇಂದ್ರ ಸ್ಥಾಪನೆ: ಸಚಿವ ಯು.ಟಿ. ಖಾದರ್

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ22 Nov 2026 3:13 PM IST
share
ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಘಟಕ, ಮಹಿಳೆಯರಿಗಾಗಿ ಸರಕಾರಿ ಐವಿಎಫ್ ಕೇಂದ್ರ ಸ್ಥಾಪನೆ: ಸಚಿವ ಯು.ಟಿ. ಖಾದರ್

ಬೀದರ್: ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ಐದು ಹಾಸಿಗೆಗಳ ಐಸಿಯು ಘಟಕ ಸ್ಥಾಪನೆ, ಟೆಲಿಮೆಡಿಸಿನ್ ವ್ಯವಸ್ಥೆ ಜಾರಿ ಹಾಗೂ ಮಹಿಳೆಯರಿಗಾಗಿ ಸರ್ಕಾರಿ ಐವಿಎಫ್ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಜನಸಾಮಾನ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್‌ಗಳು ಹಾಗೂ ಫಾರ್ಮಸಿಸ್ಟ್‌ಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ ಎಂದರು.

ಈಗಾಗಲೇ 200ಕ್ಕೂ ಅಧಿಕ ಎಂಬಿಬಿಎಸ್ ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ವೈದ್ಯರು ಮತ್ತು ನರ್ಸ್‌ಗಳು ಸೇರಿದಂತೆ ಸುಮಾರು 1 ಸಾವಿರ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಆಹಾರ ಸುರಕ್ಷತಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಈಗಿರುವ 25 ಅಧಿಕಾರಿಗಳ ಜೊತೆಗೆ ಇನ್ನೂ 25 ಅಧಿಕಾರಿಗಳ ನೇಮಕಕ್ಕೂ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ತಾಲೂಕು ಆಸ್ಪತ್ರೆಗಳನ್ನು ಬಲಪಡಿಸುವ ಉದ್ದೇಶದಿಂದ ಪ್ರತಿಯೊಂದು ತಾಲೂಕು ಆಸ್ಪತ್ರೆಯಲ್ಲೂ ಕನಿಷ್ಠ ಐದು ಹಾಸಿಗೆಗಳ ಐಸಿಯು ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ಗಂಭೀರ ಕಾಯಿಲೆಗಳಿಗೆ ತಾಲೂಕು ಮಟ್ಟದಲ್ಲಿಯೇ ಪ್ರಾಥಮಿಕ ಹಂತದ ಚಿಕಿತ್ಸೆ ದೊರೆಯುವಂತೆ ಟೆಲಿಮೆಡಿಸಿನ್ ವ್ಯವಸ್ಥೆಯನ್ನೂ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಜಿಲ್ಲಾ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗುವುದರ ಜೊತೆಗೆ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉತ್ತಮ ಚಿಕಿತ್ಸೆ ಲಭ್ಯವಾಗಲಿದೆ ಎಂದರು.

ಆಹಾರ ಸುರಕ್ಷತೆಗೆ ಕ್ಯೂಆರ್ ಕೋಡ್ ವ್ಯವಸ್ಥೆ :

ಜನರಿಗೆ ಗುಣಮಟ್ಟದ ಆಹಾರ ಮತ್ತು ಔಷಧ ದೊರೆಯುವಂತೆ ಮಾಡಲು ಆಹಾರ ಸುರಕ್ಷತಾ ಇಲಾಖೆಯ ಮೂಲಕ ರಾಜ್ಯಾದ್ಯಂತ ತಪಾಸಣೆ ನಡೆಸಲಾಗುತ್ತಿದೆ. ಹೋಟೆಲ್‌ಗಳು, ಅಂಗಡಿಗಳು ಹಾಗೂ ಔಷಧ ಮಳಿಗೆಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸುವ ವ್ಯವಸ್ಥೆ ರೂಪಿಸಲಾಗಿದೆ. ಗ್ರಾಹಕರು ಕಳಪೆ ಆಹಾರ, ನಕಲಿ ಔಷಧ, ಬಿಲ್ ನೀಡದಿರುವುದು ಅಥವಾ ಗುಣಮಟ್ಟದ ಕೊರತೆ ಕಂಡುಬಂದಲ್ಲಿ ಕ್ಯೂಆರ್ ಕೋಡ್ ಮೂಲಕ ದೂರು ಸಲ್ಲಿಸಬಹುದು. ದೂರು ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೋಟೆಲ್‌ಗಳು ಹಾಗೂ ಆಹಾರ ಉತ್ಪಾದನಾ ಘಟಕಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ಸಂಗ್ರಹ ಮತ್ತು ವಿಲೇವಾರಿಯನ್ನು ನಿಯಮಬದ್ಧವಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದರು.

ಮಹಿಳೆಯರಿಗಾಗಿ ಸರ್ಕಾರಿ ಐವಿಎಫ್ ಕೇಂದ್ರಗಳು :

ಮಹಿಳೆಯರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಲು ಪ್ರತ್ಯೇಕ ಮಹಿಳಾ ಆರೋಗ್ಯ ಯೋಜನೆ ರೂಪಿಸಲಾಗುತ್ತಿದೆ. ಮಕ್ಕಳಿಂದ ಹಿಡಿದು ಮಹಿಳೆಯರ ವಿವಿಧ ಹಂತಗಳ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಮಹಿಳೆಯರಿಗೆ ಅನುಕೂಲವಾಗುವಂತೆ ಸರ್ಕಾರಿ ವಲಯದಲ್ಲಿಯೇ ಐವಿಎಫ್ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ಮಂಗಳೂರು, ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

350 ಹೊಸ ಆಂಬುಲೆನ್ಸ್‌ಗಳ ಸೇರ್ಪಡೆ :

ತುರ್ತು ಆರೋಗ್ಯ ಸೇವೆಗಳನ್ನು ಮತ್ತಷ್ಟು ಸುಧಾರಿಸಲು ಸರ್ಕಾರ 350 ಹೊಸ ಆಂಬುಲೆನ್ಸ್‌ಗಳನ್ನು ಒದಗಿಸಿದೆ. ಈಗಾಗಲೇ 450 ಆಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಹೊಸ ವಾಹನಗಳು ಸೇವೆಗೆ ಸೇರ್ಪಡೆಯಾದ ಬಳಿಕ ಒಟ್ಟು ಸುಮಾರು 800 ಆಂಬುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ. ಇದರಿಂದ ರಾಜ್ಯದ ಎಲ್ಲ ಭಾಗಗಳಿಗೂ ತುರ್ತು ಸಂದರ್ಭದಲ್ಲಿ ಸಕಾಲದಲ್ಲಿ ಆಂಬುಲೆನ್ಸ್ ಸೇವೆ ತಲುಪಿಸಲು ಸಾಧ್ಯವಾಗಲಿದೆ ಎಂದರು.

ಹಜ್ ಮತ್ತು ಉಮ್ರಾ ಯಾತ್ರೆಗೆ ತೆರಳುವವರಿಗೆ ವಂಚನೆಯಾಗದಂತೆ ನಿಯಮಾವಳಿ ರೂಪಿಸಲು ಸರ್ಕಾರ ಮುಂದಾಗಿದೆ. ಉಮ್ರಾ ಟ್ರಾವೆಲ್ಸ್ ಏಜೆನ್ಸಿಗಳ ಕಾರ್ಯವೈಖರಿಗೆ ನಿಯಂತ್ರಣ ತಂದು, ಕಡಿಮೆ ದರದ ಆಮಿಷವೊಡ್ಡಿ ಯಾತ್ರಿಕರನ್ನು ವಂಚಿಸುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸಲು ಪ್ರಯತ್ನ :

ಆಶಾ ಕಾರ್ಯಕರ್ತರ ಬೇಡಿಕೆಗಳ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮುಖ್ಯಮಂತ್ರಿ ಅವರು ಈ ವಿಷಯದ ಕುರಿತು ಸುಮಾರು ಒಂದು ಗಂಟೆ ಕಾಲ ಚರ್ಚಿಸಿದ್ದು, ಅಧಿಕಾರಿಗಳು ಹಾಗೂ ಸಚಿವ ಸಂಪುಟದೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಸ್ವಲ್ಪ ಸಮಯಾವಕಾಶ ಕೋರಿದ್ದಾರೆ. ಈ ಹಿಂದೆ ನೀಡಿದ ಭರವಸೆಗಳು ಈಡೇರಿಲ್ಲ ಎಂಬ ಆಶಾ ಕಾರ್ಯಕರ್ತರ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಿ, ಈ ಬಾರಿ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ರಾಹೀಂ ಖಾನ್, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗಿರ್ದಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್ ಹಾಗೂ ದತ್ತಾತ್ರಿ ಮೂಲಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

ICUTaluk HospitalsGovernmentIVF CentresWomenU.T.Khader
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X