Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜನಸ್ಪಂದನ ಕಾರ್ಯಕ್ರಮದಲ್ಲಿ ತಕ್ಷಣವೇ...

ಜನಸ್ಪಂದನ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು : ಸಚಿವ ರಹೀಂ ಖಾನ್

ವಾರ್ತಾಭಾರತಿವಾರ್ತಾಭಾರತಿ1 July 2025 9:44 PM IST
share
ಜನಸ್ಪಂದನ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು : ಸಚಿವ ರಹೀಂ ಖಾನ್

ಬೀದರ್ : ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.

ಇಂದು ಜನವಾಡದ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ, ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲ್ಲೆ ಇದ್ದು ನೇರವಾಗಿ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ. ಜನವಾಡದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಆಸ್ಪತ್ರೆ ನಿರ್ಮಾಣವಾಗಲಿದೆ. ಹಾಗೆಯೇ ಈ ಭಾಗದಲ್ಲಿ ಅನೇಕ ರಸ್ತೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ ಎಂದರು.

ಎ ಮತ್ತು ಬಿ ಖಾತಾಗಳ ಸೇವೆಗಳು ಪಂಚಾಯತ್‌ ಮಟ್ಟದಲ್ಲಿ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ಒದಗಿಸುವ ಪಂಚ ಗ್ಯಾರಂಟಿಗಳು ಜನರ ಜೀವನ ಮಟ್ಟ ಸುಧಾರಿಸುತ್ತಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಈ ಕಾರ್ಯಕ್ರಮವು ಜನರಿಗೆ ಅತ್ಯಂತ ಉಪಯುಕ್ತವಾಗಿದ್ದು, ಜನರು ನೇರವಾಗಿ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದರು.

ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 253 ಅರ್ಜಿಗಳು ಪಡೆದುಕೊಂಡಿದ್ದು ಇದರಲ್ಲಿ ರಸ್ತೆ, ಮನೆ, ನೀರು, ಸಾರಿಗೆ, ವಿದ್ಯುತ್, ಜಮೀನು, ಒಳಚರಂಡಿ ಸ್ವಚ್ಛತೆ, ಪಿಂಚಣಿ, ರೇಷನ್ ಕಾರ್ಡ್, ಗಂಗಾ ಕಲ್ಯಾಣ ಯೋಜನೆಯಡಿ ಬೋರವೆಲ್, ದೈಹಿಕ ಅಂಗವಿಕಲತೆ ಪ್ರಮಾಣ ಪತ್ರ ಸಮಸ್ಯೆ, ಸಮಾಜ ಕಲ್ಯಾಣ ಇಲಾಖೆಯಲ್ಲಿನ ಸಿಬ್ಬಂದಿ ನೇಮಕ ಮತ್ತು ಜನವಾಡ ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿ ಸ್ಥಳಾಂತರಿಸುವ ಕುರಿತು ಅರ್ಜಿಗಳಿದ್ದು, ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಮತ್ತು ಇನ್ನೂಳಿದ ಅರ್ಜಿಯನ್ನು 7 ದಿನದ ಒಳಗಾಗಿ ಇತ್ಯರ್ಥಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಧವಾ ಆದೇಶ ಪತ್ರ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ , ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಲು ಜಾಬ್ ಕಾರ್ಡ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ್ ಜಿಲ್ಲಾಧಿಕಾರಿ ಡಾ.ಈಶ್ವರ್ ಉಳ್ಳಾಗಡ್ಡಿ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ಸಹಾಯಕ ಆಯುಕ್ತ ಮಹಮದ್ ಶಕೀಲ್, ಬೀದರ್ ತಹಸಿಲ್ದಾರ್ ಡಿ. ಮೆಹತ್, ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ್, ನಾಡ ತಹಶೀಲ್ದಾರ್ ಅಶೋಕ್ ರಾಜಗಿರಾ, ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಕಿರಣ್ ಕುಮಾರ್ ಹಾಗೂ ಜನವಾಡ ಗ್ರಾಮ ಪಂಚಾಯತ್‌ ಅಧ್ಯಕ್ಷೆ ವೈಜಯಂತಿಬಾಯಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಜನವಾಡ ಹೊಬಳಿಯ ವಿವಿಧ ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X