Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್...

ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೀದರ್‌ನಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Oct 2026 5:11 PM IST
share
ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೀದರ್‌ನಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ಬೀದರ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಆಗ್ರಹಿಸಿ, ಇಂಡಿಯಾ ಮೈತ್ರಿಕೂಟದ ಪಕ್ಷಗಳ ಒಕ್ಕೂಟದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿಯು ಶಿವಾಜಿ ವೃತ್ತದ ಮೂಲಕ ಸಹಾಯಕ ಆಯುಕ್ತರ ಕಚೇರಿವರೆಗೆ ಸಾಗಿತು. ರ‍್ಯಾಲಿಯುದ್ದಕ್ಕೂ ಎಸ್‌ಐಆರ್ ಪ್ರಕ್ರಿಯೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಸಲ್ಲಿಸಿದ ಮನವಿಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯೋಗವು ದೇಶದ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕೈಗೊಂಡಿದೆ. ಈ ಪ್ರಕ್ರಿಯೆಯ ಪರಿಣಾಮವಾಗಿ ಕೋಟ್ಯಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಇದು ಕೇವಲ ತಾಂತ್ರಿಕ ಅಥವಾ ಆಡಳಿತಾತ್ಮಕ ಲೋಪವಲ್ಲ; ಕೋಟ್ಯಂತರ ನಾಗರಿಕರ ಸಾಂವಿಧಾನಿಕ ಹಕ್ಕಿನ ಮೇಲಿನ ನೇರ ಪ್ರಹಾರವಾಗಿದೆ ಎಂದು ಆರೋಪಿಸಲಾಗಿದೆ.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ವಾಕ್‌ಸ್ವಾತಂತ್ರ್ಯ ಹಾಗೂ ಶಾಂತಿಯುತವಾಗಿ, ಶಸ್ತ್ರರಹಿತವಾಗಿ ಸಭೆ ಸೇರುವ ಮೂಲಭೂತ ಹಕ್ಕುಗಳನ್ನು ನೀಡಿದೆ. ಪ್ರತಿಭಟನೆಯು ಪ್ರಜಾಪ್ರಭುತ್ವದ ಜೀವನಾಡಿಯಾಗಿದೆ. ಜನರ ಮತದಾನದ ಹಕ್ಕಿಗೆ ಸಂಬಂಧಿಸಿದ ವಿಷಯದಲ್ಲಿ ಪ್ರತಿಪಕ್ಷಗಳು ಪ್ರತಿಭಟಿಸುವುದು ಅವುಗಳ ಹಕ್ಕು ಮಾತ್ರವಲ್ಲ, ಸಾಂವಿಧಾನಿಕ ಕರ್ತವ್ಯವೂ ಆಗಿದೆ. ಆದರೆ, ಪ್ರತಿಭಟನಾಕಾರರನ್ನು ಬಂಧಿಸುವುದು ಪ್ರಜಾಪ್ರಭುತ್ವದ ಮೇಲಿನ ನೇರ ಆಕ್ರಮಣವಾಗಿದೆ ಎಂದು ಮನವಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಸಂಪೂರ್ಣ ಪಾರದರ್ಶಕತೆ ಹಾಗೂ ಕಾನೂನುಬದ್ಧ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ಮುಂದುವರಿಸಬೇಕು. ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪಗಳ ಕುರಿತು ತಕ್ಷಣ ಸಮಗ್ರ ಪರಿಶೀಲನೆ ನಡೆಸಿ, ಅಂತಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು. ವಿಶೇಷವಾಗಿ ಉಲ್ಲೇಖಿಸಲಾಗಿರುವ 13.30 ಕೋಟಿ ಮತದಾರರ ಹೆಸರುಗಳ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಸಂಭವಿಸಿವೆ ಎನ್ನಲಾದ ಗಂಭೀರ ಚುನಾವಣಾ ಅಕ್ರಮಗಳ ಕುರಿತು ಸೂಕ್ತ ಕಾನೂನುಬದ್ಧ ಪರಿಶೀಲನೆ ನಡೆಸಬೇಕು. ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಬಲಪಡಿಸುವ ನಿಟ್ಟಿನಲ್ಲಿ ಇವಿಎಂ ಆಧಾರಿತ ಮತದಾನ ವ್ಯವಸ್ಥೆಯ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡುವ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಚುನಾವಣಾ ಆಯೋಗದಂತಹ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯ ಮುಖ್ಯಸ್ಥರು ಸಾರ್ವಜನಿಕರ ವಿಶ್ವಾಸದ ಕೊರತೆಗೆ ಗುರಿಯಾದಾಗ ನೈತಿಕ ಹೊಣೆ ಹೊತ್ತು ಹುದ್ದೆಯಿಂದ ಹಿಂದೆ ಸರಿಯುವುದು ಪ್ರಜಾಪ್ರಭುತ್ವದ ಉನ್ನತ ಸಂಪ್ರದಾಯವಾಗಿದೆ. ಆದ್ದರಿಂದ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ತಮ್ಮ ಆಗ್ರಹಗಳು ಈಡೇರದಿದ್ದರೆ ಶಾಂತಿಯುತ ಹಾಗೂ ಸಂವಿಧಾನಬದ್ಧ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಬುಡಾ ಅಧ್ಯಕ್ಷ ವಿನೋದಕುಮಾರ್ ಅಪ್ಪೆ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಸಿಪಿಐ(ಎಂ)ನ ಕೆ. ನೀಲಾ, ಸಿಪಿಐನ ಬಾಬುರಾವ್ ಹೊನ್ನಾ, ವಿಠಲದಾಸ್ ಪ್ಯಾಗೆ, ವಿನಯ್ ಮಾಳಗೆ, ಶಶಿಕಾಂತ್ ಡಾಂಗೆ, ರೇಷ್ಮಾ ಹಂಶರಾಜ್ ಹಾಗೂ ಸಾವಿತ್ರಿ ಸೇರಿದಂತೆ ಇಂಡಿಯಾ ಒಕ್ಕೂಟದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

SIRBidarProtests
share
ವಾರ್ತಾಭಾರತಿ
ವಾರ್ತಾಭಾರತಿ
Next Story
X