Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜಾತಿ ನಿರ್ಮೂಲನೆ ಮಾಡಬೇಕಾದರೆ ಅಂತರ್ಜಾತಿ...

ಜಾತಿ ನಿರ್ಮೂಲನೆ ಮಾಡಬೇಕಾದರೆ ಅಂತರ್ಜಾತಿ ವಿವಾಹಗಳು ಆಗಬೇಕಿದೆ : ವಿಜಯಲಕ್ಷ್ಮಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 April 2025 9:43 PM IST
share
ಜಾತಿ ನಿರ್ಮೂಲನೆ ಮಾಡಬೇಕಾದರೆ ಅಂತರ್ಜಾತಿ ವಿವಾಹಗಳು ಆಗಬೇಕಿದೆ : ವಿಜಯಲಕ್ಷ್ಮಿ ಪಾಟೀಲ್

ಬೀದರ್ : ಜಾತಿ ನಿರ್ಮೂಲನೆ ಮಾಡಬೇಕಾದರೆ ಇಂದಿನ ದಿನಗಳಲ್ಲಿ ಅಂತರ್ಜಾತಿ ವಿವಾಹಗಳು ಆಗಬೇಕಿದೆ. ಇದರಿಂದ ಮಾತ್ರ ಜಾತಿ ಹೋಗಲಾಡಿಸಲು ಸಾಧ್ಯವಿದೆ ಎಂದು ಜನವಾದಿ ಮಹಿಳಾ ಸಂಘದ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್ ಗಡ್ಡೆ ಅವರು ಹೇಳಿದರು.

ಇಂದು ನಗರದ ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಡೆದ ಡಾ. ಅಂಬೇಡ್ಕರ್ ಅವರ ಜಯಂತಿಯ ನಿಮಿತ್ಯ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇವತ್ತಿಗೂ ಕೂಡ ಇಷ್ಟೆಲ್ಲ ಜ್ಞಾನಿಗಳಿದ್ದರೂ, ಓದು, ಬರಹ ಕಲಿತು ಸಂವಿಧಾನ ಬಲ್ಲಿದವರಾಗಿದ್ದರು ಕೂಡ ಅಂತರ್ಜಾತಿ ವಿವಾಹವಾಗುವವರನ್ನು ಹತ್ಯೆ ಮಾಡುತ್ತಿದ್ದಾರೆ. ನಾವು ಇದಕ್ಕೆ ಮರ್ಯಾದೆ ಕೇಡು ಎಂದು ಕರೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಹಿಳೆಯರನ್ನ ಅಗೌರವದಿಂದ ನೋಡಿ, ತುಚ್ಛಿಕರಣದಿಂದ ಮಾತಾಡುವವರಿಗೆ ಇವತ್ತು ಬಾಬಾಸಾಹೇಬರ ಹೆಸರು ಕೂಡ ತೆಗೆದುಕೊಳ್ಳುವ ಹಕ್ಕು ಕೂಡ ಇಲ್ಲ. ಭಾರತದ ಮಹಿಳೆಯರಿಗೆ ಸಂವಿಧಾನದ ಹಕ್ಕುಗಳು ಸಿಗುವಂತಾಗಬೇಕು ಎಂದು ತಿಳಿಸಿದರು.

ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನದಲ್ಲಿ 340 ನೇ ವಿಧಿ ನೀಡಿದ್ದಾರೆ. ಅದು ಇನ್ನು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕಿದೆ. ಈ ದೇಶದ ಪ್ರಜಾಪ್ರಭುತ್ವ ಯಾವಾಗ ಯಶಸ್ವಿಯಾಗುತ್ತದೆ ಎಂದರೆ ದೇಶದಲ್ಲಿರುವ 140 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಾಗ ಮಾತ್ರ ಯಶಸ್ವಿಯಾಗುತ್ತದೆ ಎಂದರು.

ನಮ್ಮ ಜಿಲ್ಲೆ ಎಲ್ಲ ರೀತಿಯಿಂದ ಮುಂದುವರೆದು, ಶೋಷಣ ಮುಕ್ತ, ಜಾತಿ ರಹಿತ ಜಿಲ್ಲೆಯಾಗಬೇಕು ಎನ್ನುವ ದೂರದೃಷ್ಟಿ ಇಟ್ಟುಕೊಂಡು ನಾವು ಅನೇಕ ರೀತಿಯ ಅಭಿವೃದ್ಧಿ ಕೆಲಸಗಳು ಮಾಡುತ್ತಿದ್ದೇವೆ ಎಂದು ತಿಳಿಸಿದ ಅವರು, ಇಲ್ಲಿರುವ ಹಿಂದುಳಿದ ವರ್ಗಗಳ ಒಕ್ಕೂಟದಲ್ಲಿ ಬರುವ ಹತ್ತು ಹದಿನೈದು ಸಣ್ಣ ಸಣ್ಣ ಎಲ್ಲ ಸಮುದಾಯಗಳಿಗೆ ತಮ್ಮದೆ ಆದಂತಹ ಭವನ ನಿರ್ಮಾಣ ಮಾಡುವುದಕ್ಕೆ ಸರಕಾರದಿಂದ ನಿವೇಶನ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜಪ್ಪ ಮುತ್ತ್ಯಾ ಕರಕನಳ್ಳಿ ಅವರು ಸಾನಿಧ್ಯ ವಹಿಸಿದ್ದರು. ಪೌರಾಡಳಿತ ಮತ್ತು ಹಜ್ ಸಚಿವ ರಹಿಮ್ ಖಾನ್, ಬುಡಾದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಹಿಂದುಳಿದ ವರ್ಗಗಳ ಒಕ್ಕೂಟದ ಉಪಾಧ್ಯಕ್ಷ ತಾನಾಜಿ ಸಗರ್, ಅಮೃತರಾವ್ ಚಿಮಕೋಡೆ, ಅಬ್ದುಲ್ ಮನ್ನಾನ್ ಶೇಠ್, ಶಶಿಕಲಾ ಮಾಳಗೆ, ಡಾ.ರಾಜಶೇಖರ್ ಸೇಡಂಕರ್, ಬಾಬುರಾವ್ ಕುಂಬಾರ್, ಮಹಾಂತೇಶ್ ವಕೀಲ್, ಬಾಬುರಾವ್ ಪಾಸ್ವನ್, ರಮೇಶ್ ಡಾಕುಳಗಿ, ವಿದ್ಯಾವತಿ ತುಗಾಂವೆ, ಅನಿಲಕುಮಾರ್ ಬೆಲ್ದಾರ್, ಆನಂದ್ ದೇವಪ್ಪ ಹಾಗೂ ಪ್ರದೀಪ್ ನಾಟೆಕರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X