Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ವೃಕ್ಷ ಸಂಪತ್ತಿನ ಸಂರಕ್ಷಣಾ ಕಾಯಿದೆಗೆ...

ವೃಕ್ಷ ಸಂಪತ್ತಿನ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ5 Jun 2024 7:03 PM IST
share
ವೃಕ್ಷ ಸಂಪತ್ತಿನ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ : ಸಚಿವ ಈಶ್ವರ್ ಖಂಡ್ರೆ

ಭಾಲ್ಕಿ(ಬೀದರ್): ರಾಜ್ಯದ ಅರಣ್ಯ, ಗೋಮಾಳ, ಸರಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬುಧವಾರ ಭಾಲ್ಕಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ್ ಖಂಡ್ರೆ ಅವರೊಂದಿಗೆ ಗಿಡಗಳನ್ನು ನೆಟ್ಟ ಬಳಿಕ ಮಾತನಾಡಿದ ಅವರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿದ್ದು ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆಯ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪರಿಸರ ಹಾನಿಯ ಅಧ್ಯಯನ: ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೆ ಮೂಲಭೂತ ಸೌಕರ್ಯ ಯೋಜನೆ ಇರಲಿ ಅಥವಾ ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ ಎಂದು ಅವರು ಹೇಳಿದರು.

ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಟ್ಟಾರೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಚಿಂತಿಸಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.

ವನಮಹೋತ್ಸವದ ವೇಳೆ ಗಿಡಗಳು ಆಳವಾಗಿ ಭೂಮಿಯಲ್ಲಿ ಬೇರು ಬಿಡುವಂತೆ ವೈಜ್ಞಾನಿಕವಾಗಿ ಸಸಿ ನೆಡುವಂತೆ ಸೂಚಿಸಲಾಗುವುದು. ಇದರಿಂದ ಬದುಕಿ ಉಳಿಯುವ ಸಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X