Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹಸಿರು ಕ್ರಾಂತಿಯಿಂದ ಜನತೆಯ ಹಸಿವು...

ಹಸಿರು ಕ್ರಾಂತಿಯಿಂದ ಜನತೆಯ ಹಸಿವು ನೀಗಿಸಿದ ಶ್ರೇಷ್ಠ ನಾಯಕ ಡಾ.ಬಾಬು ಜಗಜೀವನ ರಾಮ್ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ5 April 2025 8:19 PM IST
share
Photo of Program

ಬೀದರ್ : ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನ ರಾಮ್ ಅವರು ಹಸಿರು ಕ್ರಾಂತಿಯ ಮೂಲಕ ದೇಶದ ಜನತೆಯ ಹಸಿವು ನೀಗಿಸಿದ್ದಾರೆ ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.

ಇಂದು ನಗರದ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರ ನಾಯಕರಾದ ಡಾ.ಬಾಬು ಜಗಜೀವನರಾಮ್ ಅವರು ಶೋಷಿತ ವರ್ಗದ ಮತ್ತು ಕಾರ್ಮಿಕರ ಧ್ವನಿಯಾಗಿ, ದಕ್ಷ ಆಡಳಿತಗಾರರಾಗಿ, ಸ್ವಾತಂತ್ರ‍್ಯ ಹೋರಾಟಗಾರಾಗಿ, ಸಮಾಜ ಸುಧಾರಕರಾಗಿ, ಅಸ್ಪೃಶ್ಯತೆ, ಅಸಮಾನತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ದೇಶದಲ್ಲಿ ಬರಗಾಲ ಬಂದಾಗ ಜನರು ಹಸಿವಿನಿಂದ ನರಳುತ್ತಿರುವ ಸಮಯದಲ್ಲಿ ಹಸಿರು ಕ್ರಾಂತಿಯ ಮೂಲಕ ದೇಶದ ಜನರು ಎದುರಿಸುತ್ತಿರುವ ಆಹಾರ ಸಮಸ್ಯೆಯನ್ನು ಬಗೆಹರಿಸಿದರು ಎಂದು ಅವರು ತಿಳಿಸಿದರು.

ಜಗಜೀವನ್ ರಾಮ್ ಅವರು ಕೇಂದ್ರ ಆಹಾರ, ಕೃಷಿ ಮತ್ತು ರಕ್ಷಣಾ ಸಚಿವರಾಗಿ ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. 1971 ರಲ್ಲಿ ಇಂದಿರಾ ಗಾಂಧಿ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದಾಗ ಪಾಕಿಸ್ತಾನದ ಮೇಲೆ ಯುದ್ದ ಮಾಡಿ ಬಾಂಗ್ಲಾದೇಶದ ಸೃಷ್ಟಿಗೆ ಕಾರಣರಾದರು. ಅವರು ತೋರಿರುವ ಮಾರ್ಗದಲ್ಲಿ ನಾವೇಲ್ಲರೂ ಸಾಗಬೇಕು. ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಅವರು ನುಡಿದರು.

ಹಾಗೆಯೇ ನಗರದ ಚಿಕ್ಕಪೇಟನ ಸರ್ವೆ ನಂ. 61 ರಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಭವನದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮಕ್ಕೂ ಮುಂಚೆ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಡಾ.ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಲಬುರಗಿ ವಲಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ್ ಹೂಗಾರ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು ರಘು ಎಚ್.ಎಸ್ ಹಾಗೂ ಸಮಾಜದ ಮುಖಂಡರಾದ ಚಂದ್ರಕಾಂತ್ ಹಿಪ್ಪಳಗಾಂವ್, ರಾಜು ಕಡ್ಯಾಳ್, ಫರ್ನಾಂಡಿಸ್ ಹಿಪ್ಪಳಗಾಂವ್, ಶಾಮಣ್ಣ ಬಂಬಳಗಿ, ವಿಜಯಕುಮಾರ್ ಸೊನಾರೆ, ರೋಹಿದಾಸ್ ಘೋಡೆ ಮತ್ತು ಪೀಟರ್ ಚಿಟಗುಪ್ಪಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X