ಬೀದರ್ | ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ನೇಮಕ

ಬೀದರ್ : ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರ ಅನುಮೋದನೆಯ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಂಜುಕುಮಾರ್ ಡಿ.ಕುರನಳ್ಳಿಕರ್ ಅವರು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜನಾರ್ದನ ಪುಟ್ಟರಾಜ ದೀನೆ ಅವರು ನಗರದ ನಾವದಗೇರಿ ಬಡಾವಣೆಯವರಾಗಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷ ಸಂಘಟನೆಯ ಬಲವರ್ಧನೆಗಾಗಿ ನೇಮಕ ಮಾಡಿದೆ. ಪಕ್ಷದ ತತ್ವ, ಸಿದ್ಧಾಂತ ಮತ್ತು ಶಿಸ್ತಿಗೆ ಒಳಪಟ್ಟು ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದು ನೇಮಕಾತಿ ಪತ್ರದಲ್ಲಿ ತಿಳಿಸಲಾಗಿದೆ.
Next Story





