Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ |ಕನಕದಾಸರು ಮೌಢ್ಯಕ್ಕೆ ಕೊಳ್ಳಿ...

ಬೀದರ್‌ |ಕನಕದಾಸರು ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ : ಪಾರ್ವತಿ ಸೋನಾರೆ

ವಾರ್ತಾಭಾರತಿವಾರ್ತಾಭಾರತಿ8 Nov 2025 6:51 PM IST
share
ಬೀದರ್‌ |ಕನಕದಾಸರು ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ : ಪಾರ್ವತಿ ಸೋನಾರೆ

ಔರಾದ್ : ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತರಾಗಿದ್ದಾರೆ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅವರು ಅಭಿಪ್ರಾಯಪಟ್ಟರು.

ಇಂದು ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ ಕನಕದಾಸರ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಪಾರ್ವತಿ ಸೋನಾರೆ, ಕನಕದಾಸರ ಕೀರ್ತನೆಗಳಲ್ಲಿ ಮಾನವೀಯತೆ, ಸರ್ವಧರ್ಮ ಸಮಾನತೆಯ ವಿಚಾರಗಳಿವೆ. ಕನಕದಾಸರು ಕನ್ನಡ ನಾಡು ಕಂಡ ಶ್ರೇಷ್ಠ ಚಿಂತಕರಾಗಿದ್ದಾರೆ. ಜಾತಿ ವ್ಯವಸ್ಥೆ, ಶೋಷಣೆ, ಅಸಮಾನತೆಯ ವಿರುದ್ಧ ಬಂಡಾಯವೆದ್ದ ಕನಕದಾಸರು ಅನಿಷ್ಠ ಪದ್ದತಿ, ಆಚರಣೆಗಳಿಂದ ಕೂಡಿದ ಭಕ್ತಿಯು ಮನುಕುಲಕ್ಕೆ ಮಾರಕ ಎಂಬುದನ್ನು ಎಚ್ಚರಿಸಿದ್ದರು ಎಂದರು.

ಸಾಹಿತ್ಯದ ದೃಷ್ಟಿಯಿಂದ ನೋಡಿದರೂ ಕನಕದಾಸ ಎಲ್ಲರಿಗಿಂತ ಮುಂಚೂಣಿಯಲ್ಲಿದ್ದಂತೆ ಕಾಣುತ್ತದೆ. ಕೀರ್ತನೆ, ಸುಳಾದಿ, ಉಗಾಭೋಗಗಳು, ಮುಂಡಿಗೆಗಳು, ಕಾವ್ಯ ಕೃತಿಗಳ ಮೂಲಕ ಕನ್ನಡವನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ದಿದ್ದಾರೆ ಎಂದು ತಿಳಿಸಿದರು.

ತಹಶೀಲ್ದಾರ್ ಮಹೇಶ್ ಪಾಟೀಲ್ ಅವರು ಮಾತನಾಡಿ, ಕನ್ನಡ ಸಾಹಿತ್ಯದ ತೂಕ ಹೆಚ್ಚಿಸಿದ ಕನಕದಾಸರು ಬರೆದ ರಾಮಧಾನ್ಯ ಚರಿತೆ ಕೃತಿ ಮೇಲು ಕೀಳು ಎಂಬ ಮನಸ್ಥಿತಿಗೆ ಉತ್ತರಿಸಿದಂತಿದೆ. ಶ್ರಮಿಕ ವರ್ಗದವರೇ ದೇವರಿಗೆ ಪ್ರೀಯವಾಗಿರುತ್ತಾರೆ. ಬದುಕಿನಲ್ಲಿ ಗಟ್ಟಿಯಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸರುಬಾಯಿ ಘುಳೆ, ಖಜಾನೆ ಅಧಿಕಾರಿ ಮಾಣಿಕ ನೇಳಗಿ, ಬಿಇಒ ರಂಗೇಶ್, ಶಿವಕುಮಾರ್ ಘಾಟೆ, ಪಟ್ಟಣ ಪಂಚಾಯತ್ ಸದಸ್ಯ ಗುಂಡಪ್ಪ ಮುದಾಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ, ರಾಮಣ್ಣ ವಡೆಯರ್, ಡಾ. ವೈಜಿನಾಥ್ ಬುಟ್ಟೆ, ಶಿವಕುಮಾರ್ ಮೇತ್ರೆ, ಶಿವರಾಜ್ ಅಲಮಾಜೆ, ಶಿವಾಜಿರಾವ್ ಪಾಮುದಾಳೆ, ಶ್ರಾವಣಕುಮಾರ್ ಭಂಡೆ, ರಾಜಕುಮಾರ್ ಮುದಾಳೆ, ಅರ್ಜುನ್ ಭಂಗೆ, ಸಂತೋಷ್ ಮುದಾಳೆ, ಕೃಷ್ಣ ಸಾಗಾವೆ, ಬೀರಪ್ಪ ರಕ್ಷಾಳೆ ಹಾಗೂ ಧನರಾಜ್ ಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X