Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ರೈಲ್ವೆ ಇಂಜಿನಿಯರ್...

ಬೀದರ್‌ | ರೈಲ್ವೆ ಇಂಜಿನಿಯರ್ ಸಿ.ಪಿ.ಸಿಂಗ್ ರವಿ ಅವರನ್ನು ಅಮಾನತು ಮಾಡುವಂತೆ ಸಚಿವ ಸೋಮಣ್ಣಗೆ ಕರವೇ ಮನವಿ

ವಾರ್ತಾಭಾರತಿವಾರ್ತಾಭಾರತಿ31 May 2025 6:58 PM IST
share
ಬೀದರ್‌ | ರೈಲ್ವೆ ಇಂಜಿನಿಯರ್ ಸಿ.ಪಿ.ಸಿಂಗ್ ರವಿ  ಅವರನ್ನು ಅಮಾನತು ಮಾಡುವಂತೆ ಸಚಿವ ಸೋಮಣ್ಣಗೆ ಕರವೇ ಮನವಿ

ಬೀದರ್ : ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿ ಬರುವ ಬೀದರ್ ರೈಲ್ವೆ ಇಂಜಿನಿಯರ್ ಸಿ.ಪಿ.ಸಿಂಗ್ ರವಿ ಅವರನ್ನು ಅಮಾನತು ಮಾಡುವಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಸಂಘಟನೆ ಮನವಿ ಸಲ್ಲಿಸಿದೆ.

ಸಚಿವ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿ ಬರುವ ಬೀದರ್ ರೈಲ್ವೆಯಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಪಿ.ಸಿಂಗ್ ರವಿ ಅವರು ಕರ್ನಾಟಕದ ವಿವಿಧ ವೃಂದದ ನೌಕರರಾದ ಟ್ರ‍್ಯಾಕ್ ಮ್ಯಾನ್, ಗೇಟ್ ಮ್ಯಾನ್, ಮೇಟ್ ಕೀಮ್ಯಾನ್, ವಾಚ್ ಮ್ಯಾನ್ ಮತ್ತು ಟ್ರಾಲಿ ಮ್ಯಾನ್‌ಗಳನ್ನು ಏಕ ವಚನದಲ್ಲಿ ನಿಂದಿಸಿ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಕನ್ನಡಿಗ ನೌಕರರೆಂದರೆ ಇವರಿಗೆ ಅಸಹ್ಯವಾಗಿದೆ. ಕನ್ನಡಿಗರು ಶಿಸ್ತು, ಗೌರವ ಮತ್ತು ಸಭ್ಯತೆ ಕಾಪಾಡಿಕೊಳ್ಳುತ್ತಾ ಬಂದಿರುತ್ತಾರೆ. ಇಂತಹ ಘಟನೆಗಳಿಂದ ಕನ್ನಡಿಗ ನೌಕರರ ಘನತೆ ಹಾಗೂ ನೈತಿಕತೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಇವರಿಗೆ ಅವಮಾನ ಮಾಡಿರುವುದನ್ನು ಪರಿಶೀಲಿಸಿ, ಎಲ್ಲಾ ಕನ್ನಡಿಗ ನೌಕರರಿಗೆ ಗೌರವಯುತ ಮತ್ತು ಸುರಕ್ಷಿತ ಕೆಲಸದ ವಾತಾವರಣ ನಿರ್ಮಾಣ ಮಾಡಬೇಕು. ಅದೇ ರೀತಿ ಕನ್ನಡಿಗ ನೌಕರರಿಗೆ ಅವಮಾನ ಮಾಡುತ್ತಿರುವ ಈ ಅಧಿಕಾರಿ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಸಿ.ಪಿ.ಸಿಂಗ್ ರವಿ ಅವರು ಉದ್ದೇಶಪೂರ್ವಕವಾಗಿ ಕನ್ನಡಿಗ ನೌಕರರೊಂದಿಗೆ ಕೀಳಾಗಿ ನಡೆದುಕೊಳ್ಳುತ್ತಿದ್ದಾರೆ. ಕೂಡಲೇ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು.15 ದಿನದ ಒಳಗಡೆ ಇವರನ್ನು ಅಮಾನತು ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಪೀಟರ್ ಚಿಟಗುಪ್ಪಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಮರ್ಜಾಪೂರ್, ಪ್ರಲ್ಹಾದ್ ಚಿಟ್ಟಾ ವಾಡಿ, ಡಾ.ಉದಯಸಿಂಗ್, ಅಲೆಕ್ಸಾಂಡರ್ ಕಮಠಾಣ, ಅಶೋಕ್ ನೇಮತಾಬಾದ್, ನಿಲೇಶ್ ರಾಠೋಡ್, ಧನರಾಜ್ ಚಿಟ್ಟಾ ವಾಡಿ, ರಾಜಗೊಂಡ್ ಚಿಟ್ಟಾವಾಡಿ ಹಾಗೂ ಶಿವಕುಮಾರ್ ಮಾಮೂಡಗಿ ಸೇರಿದಂತೆ ಹಲವು ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X