Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ...

ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ1 Aug 2025 8:53 PM IST
share
ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ: ಸಚಿವ ಈಶ್ವರ್ ಖಂಡ್ರೆ

ಬೀದರ್ : ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲಗೊಂಡ ಶಾಲಾ ಕಟ್ಟಡಗಳ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಯ ಕ್ಲಸ್ಟರ್ ರಚನೆಗೆ ಆದೇಶ ಮತ್ತು ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳ ಗುಣಮಟ್ಟದ ಖಾತ್ರಿಗೆ ಡಿಸಿ, ಸಿಇಓ, ಎ.ಸಿ ಮತ್ತು ಎಡಿಸಿ ಅವರು ಸ್ಥಳ ಪರಿಶೀಲನೆ ನಡೆಸಿ ಪ್ರಮಾಣೀಕರಿಸುವಂತೆ ತಿಳಿಸಿದ ಅವರು, ಮುಖ್ಯಮಂತ್ರಿಗಳು 2,025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದು, ಪ್ರಗತಿಯಲ್ಲಿರುವ ಎಲ್ಲ ಯೋಜನೆಗಳ ಗುಣಮಟ್ಟದ ಬಗ್ಗೆ ನಿಗಾ ಇಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ ಫಲಿತಾಂಶ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಕ್ಲಸ್ಟರ್ ರಚಿಸಿ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜಶಾಸ್ತ್ರ ವಿಷಯದ ತಜ್ಞ ಬೋಧಕರಿಂದ ಪರೀಕ್ಷೆಗೆ ಸಿದ್ಧತೆ ಮಾಡಿಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲಾ ಕೇಂದ್ರ ಮತ್ತು ಎಲ್ಲ ತಾಲೂಕು ಕೇಂದ್ರದಲ್ಲಿ ವಿವಿಧ ಶಾಲೆಗಳಲ್ಲಿರುವ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2 ತಿಂಗಳ ಪುನರ್ ಮನನ ತರಗತಿ ನಡೆಸುವ ಸಾಧ್ಯತೆ ಪರಿಶೀಲಿಸಬೇಕು ಎಂದರು.

ಶಿಥಿಲಗೊಂಡ ಶಾಲಾ ಕಟ್ಟಡಗಳ ಪಟ್ಟಿ ಕೇಳಿದ ಸಚಿವರು : ಬೀದರ್ ಜಿಲ್ಲೆಯಲ್ಲಿ ಹಲವು ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳು ಜೀವ ಭಯದಿಂದ ಪಾಠ ಕಲಿಯುವ ಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಜಿಲ್ಲೆಯಲ್ಲಿ ಎಷ್ಟು ಸರ್ಕಾರಿ ಶಾಲಾ ಕಾಲೇಜು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂಬ ಪಟ್ಟಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕೇಳಿದರು. ಯಾವ ಶಾಲೆಯ ಕೊಠಡಿ ಶಿಥಿಲಗೊಂಡಿದೆ ಅದನ್ನು ದುರಸ್ತಿ ಮಾಡಬಹುದೇ ಅಥವಾ ಒಡೆದು ಕಟ್ಟಬೇಕೆ ಎಂಬ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ಸ್ಪಷ್ಟ ಮಾಹಿತಿಯನ್ನು ಕಡತದಲ್ಲಿ ಸಲ್ಲಿಸುವಂತೆ ಆದೇಶ ನೀಡಿದರು.

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಯಾವ ವರ್ಷ ಕಟ್ಟಲಾಗಿದೆ? ಅದಕ್ಕೆ ಮಾಡಿರುವ ವೆಚ್ಚ ಎಷ್ಟು? ಇಷ್ಟು ಬೇಗ ಶಿಥಿಲಾವಸ್ಥೆಗೆ ಹೋಗಲು ಕಾರಣವೇನು ಎಂಬ ಬಗ್ಗೆ ಪರಿಶೀಲನಾ ವರದಿಯನ್ನು ಮುಂದಿನ ಕೆಡಿಪಿ ಸಭೆಯಲ್ಲಿ ಸಲ್ಲಿಸುವಂತೆ ಸೂಚಿಸಿದರು.

ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ತ್ವರಿತಗೊಳಿಸಬೇಕು. ನಗರದ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮರಾ ಇಲ್ಲದಿದ್ದರೆ ಅಳವಡಿಸಲು ತುರ್ತು ಕ್ರಮಕೈಗೊಳ್ಳಬೇಕು. ಅಪರಾಧಿಗಳನ್ನು ಹಿಡಿದು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆದರೆ ಮಾತ್ರ ಇಂತಹ ಘಟನೆ ಮರುಕಳಿಸದಂತೆ ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಕೌಶಲ್ಯ ತರಬೇತಿ : ದೇಶದಾದ್ಯಂತ ಇರುವಂತೆಯೇ ನಮ್ಮ ಜಿಲ್ಲೆಯಲ್ಲಿ ಕೂಡ ನಿರುದ್ಯೋಗ ಸಮಸ್ಯೆ ಇದೆ. ಯುವಕರಿಗೆ ಸ್ವಾವಲಂಬಿಗಳಾಗಿ ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಿ ಉತ್ತೇಜನ ನೀಡಬೇಕು. ಇದರ ಜೊತೆಗೆ ನಮ್ಮ ಜಿಲ್ಲೆಯ ಯುವಕರು ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಪಡೆಯುವಂತೆ ಅವರಿಗೆ ಕೌಶಲ್ಯ ತರಬೇತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಖಾತ್ರಿಪಡಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕನಿಷ್ಠ ತಲಾ 5 ಕಾಮಗಾರಿಗಳನ್ನು ಯಾಧೃಚ್ಛಿಕವಾಗಿ ಖುದ್ದು ಪರಿಶೀಲಿಸಬೇಕು ಎಂದು ಸೂಚಿಸಿದರು.

ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಲಬೆರಕೆ ಅಡುಗೆ ಎಣ್ಣೆ ಮತ್ತು ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿದೆ. ಅಧಿಕಾರಿಗಳು ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಗುಣಮಟ್ಟದ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕರಾದ ಸಿದ್ದಲಿಂಗಪ್ಪ ಪಾಟೀಲ್, ಶರಣು ಸಲಗರ್, ವಿಧಾನ ಪರಿಷತ್ ಸದಸ್ಯರಾದ ಎಂ.ಜಿ.ಮೂಳೆ, ಭೀಮರಾಯ್ ಪಾಟೀಲ್, ಚಂದ್ರಶೇಖರ್ ಪಾಟೀಲ್, ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣ, ಬುಡಾದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಖಂಡ್ರೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಂದೀಪ್ ಡಿ ಹಾಗೂ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X