ಕೆಪಿಎಸ್‌ಸಿ ನೇಮಕಾತಿ ಹಗರಣ : ಭಾಲ್ಕಿಯ ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ದಾಳಿ

ಬೀದರ್ : ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಬಸವರಾಜ್ ಕನ್ನಾಳೆ ಬಂಧನದ ಬೆನ್ನಲ್ಲೇ ಭಾಲ್ಕಿ ಪಟ್ಟಣದ ಲೆಕ್ಚರ್ ಕಾಲೋನಿಯಲ್ಲಿರುವ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.
ಕೆಪಿಎಸ್‌ಸಿ ಹಗರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ಬ್ಯಾಂಕ್‌ಗೆ ತೆರಳಿ ಬ್ಯಾಂಕ್‌ನ ವಿವಿಧ ದಾಖಲೆಗಳು, ವಹಿವಾಟುಗಳು ಹಾಗೂ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಸವರಾಜ್ ಕನ್ನಾಳೆಗೆ ಸೇರಿದ ಬ್ಯಾಂಕ್ ಖಾತೆಗಳು, ವಿವಿಧ ದಾಖಲೆಗಳನ್ನು ಪರಿಶೀಲಿಸಿದೆ. ಬಸವರಾಜ್ ಕನ್ನಾಳೆ ಮತ್ತು ಭಾಲ್ಕಿಯ ಈ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್‌ನ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
Next Story




