Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಆ.2 ರಂದು ಶೋಷಿತ ಸಮುದಾಯಗಳ ಮುಖಂಡರ...

ಆ.2 ರಂದು ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ: ಅಮೃತರಾವ್ ಚಿಮಕೊಡೆ

ವಾರ್ತಾಭಾರತಿವಾರ್ತಾಭಾರತಿ31 July 2026 11:50 PM IST
share
ಆ.2 ರಂದು ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ: ಅಮೃತರಾವ್ ಚಿಮಕೊಡೆ
ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ

ಬೀದರ್: ಆ.2 ರಂದು ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ ಹಾಗೂ ನೂತನ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭವೂ ಹಮ್ಮಿಕೊಳ್ಳಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಅಮೃತರಾವ್ ಚಿಮಕೊಡೆ ಅವರು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2015ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಅಂದಿನ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯವಾದಿ ಎಚ್. ಕಾಂತರಾಜ ಅವರ ನೇತೃತ್ವದಲ್ಲಿ ಸಮೀಕ್ಷೆಗೆ ಆದೇಶಿಸಿತ್ತು. ಬಳಿಕ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಆ ವರದಿ ಜಾರಿಯಾಗದೆ ಉಳಿಯಿತು. 2023ರಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೊಸದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸುಧನ ನಾಯಕ್ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಸುವ ಜವಾಬ್ದಾರಿ ನೀಡಲಾಗಿದ್ದು, ಅದರ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದರು.

ಈ ವರದಿಯ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದೆ. ಹಾಗೆಯೇ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ಅಹಿಂದ ವರ್ಗದ ಸಂಘಟನೆಗಳು, ಶೋಷಿತ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಉಡುಪಿಯ ಶಾಸಕ ಯಶ್‌ಪಾಲ್‌ ಸುವರ್ಣ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಅವರನ್ನು ಹಾಗೂ ಅವರ ಕುಟುಂಬವನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಹಾಗೆ ಮಾಡಲಾಗುವುದು ಎಂದು ಹೇಳಿಕೆ ನೀಡಿರುವುದಕ್ಕೆ ನಮ್ಮ ಖಂಡನೆ ಇದೆ. ಅವರ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಅವರ ಹೇಳಿಕೆ ವಿರುದ್ಧ ನಾವು ಎಸ್ಪಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದರು.

ಸಂವಿಧಾನ ಸಂರಕ್ಷಣಾ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಬೆಲ್ದಾರ್‌ ಅವರು ಮಾತನಾಡಿ, ಉಡುಪಿ ಶಾಸಕ ಯಶಪಾಲ ಸೂವರ್ಣ ಅವರ ಹೇಳಿಕೆ ಇಡೀ ಮಾನವ ಕುಲ ತಲೆ ತಗ್ಗಿಸುವಂತಾಗಿದೆ. ಇದರ ವಿರುದ್ಧ ಗೃಹ ಇಲಾಖೆ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಡಾ.ರಾಜಶೇಖರ್ ಸೇಡಂಕರ್‌, ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಗಿ,‌ ಶೋಷಿತ ಸಮುದಾಯಗಳ ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ್ ಮಾಳಗೆ, ಶೋಷಿತ ಸಮುದಾಯಗಳ ಮುಖಂಡ ಸುನಿಲ್ ಖಾಶೆಂಪುರ್, ದೇವಿದಾಸ್ ತುಮಕುಂಟೆ, ಗೋವರ್ಧನ್ ರಾಠೋಡ್, ಒಬಿಸಿ ಆರ್ಮಿ ಅಧ್ಯಕ್ಷ ತಾನಾಜಿ ಸಗರ್, ಕಾರ್ಯಾಧ್ಯಕ್ಷ ರಾಜಕುಮಾರ್ ಟಿಳ್ಳೆಕರ್, ಗೊಂಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ್ ಚಿಮಕೊಡೆ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ್ ನೀಲಿಕಟ್ಟಿ‌ ಸೇರಿದಂತೆ ಇತರರು ಇದ್ದರು.

Tags

Amrutrao ChimakodeBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X