ಹುಮನಾಬಾದ್‌ನಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ತೆರವು

ಹುಮನಾಬಾದ್ : ಕೆಡಿಪಿ ಸಭೆಯಲ್ಲಿ ನಡೆದ ಗಲಾಟೆಯಿಂದಾಗಿ ಹುಮನಾಬಾದ್ ತಾಲೂಕಿನಲ್ಲಿ ವಿಧಿಸಿದ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದ್ದು, ಎಂದಿನಂತೆ ಹುಮನಾಬಾದ್ ಪಟ್ಟಣದಲ್ಲಿ ಸುವ್ಯಸ್ಥಿತ ವಾತಾವರಣ ನಿರ್ಮಾಣವಾಗಿದೆ.
ಬೀದರ್ ನ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಜ.5ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ನ ಶಾಸಕ ಸಿದ್ದು ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರ ನಡುವೆ ನಡೆದ ಗಲಾಟೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜ.5 ರಂದು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಕಲಂ 163 (1) ರ ಅನ್ವಯ ನಿಷೇಧಾಜ್ಞೆ ಹೊರಡಿಸಲಾಗಿತ್ತು.
ಬುಧವಾರ ಸಾಯಂಕಾಲ 5:30 ಗಂಟೆಯಿಂದ ಜಾರಿಗೆ ಬರುವಂತೆ ಈ ನಿಷೇಧಾಜ್ಞೆಯನ್ನು ಹಿಂಪಡೆಯಲಾಗಿದೆ ಎಂದು ಹುಮನಾಬಾದ್ ತಹಶೀಲ್ದಾರರು ತಿಳಿಸಿದ್ದಾರೆ.
Next Story





