Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜೈನ, ಬೌದ್ಧ ಧರ್ಮಗಳಂತೆ ಲಿಂಗಾಯತ...

ಜೈನ, ಬೌದ್ಧ ಧರ್ಮಗಳಂತೆ ಲಿಂಗಾಯತ ಧರ್ಮಕ್ಕೂ ಸ್ವತಂತ್ರ ಮಾನ್ಯತೆ ಸಿಗಲಿ: ಬಸವಲಿಂಗ ಪಟ್ಟದೇವರು

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರಕ್ಕೆ ವಿಜಯೇಂದ್ರ ವಿರೋಧ: ಬಸವಕಲ್ಯಾಣದಲ್ಲಿ ‘ಗೋ ಬ್ಯಾಕ್’ ಘೋಷಣೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ28 Nov 2026 6:56 PM IST
share
ಜೈನ, ಬೌದ್ಧ ಧರ್ಮಗಳಂತೆ ಲಿಂಗಾಯತ ಧರ್ಮಕ್ಕೂ ಸ್ವತಂತ್ರ ಮಾನ್ಯತೆ ಸಿಗಲಿ: ಬಸವಲಿಂಗ ಪಟ್ಟದೇವರು

ಬಸವಕಲ್ಯಾಣ: ಬಸವ ಸಂಸ್ಕೃತಿ ಅಭಿಯಾನದಲ್ಲಿ ಭಾಗವಹಿಸಿದ್ದ ಸ್ವಾಮಿಗಳಿಗೆ ಹಿಂದೂ ವಿರೋಧಿಗಳೆಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ. ಆದರೆ ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳಾಗಿದ್ದೇವೆ. ಹಿಂದೂ ಧರ್ಮದ ವ್ಯಾಪ್ತಿಯಲ್ಲಿಯೇ ಲಿಂಗಾಯತ ಸ್ವತಂತ್ರ ಧರ್ಮವೆಂದು ಘೋಷಣೆಯಾಗಬೇಕು. ಜೈನ ಮತ್ತು ಬೌದ್ಧ ಧರ್ಮಗಳಂತೆಯೇ ಲಿಂಗಾಯತ ಧರ್ಮಕ್ಕೂ ಸ್ವತಂತ್ರ ಮಾನ್ಯತೆ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರು ಹೇಳಿದರು.

ನಗರದ ಹೊರವಲಯದಲ್ಲಿರುವ ಅನುಭವ ಮಂಟಪದ ಆವರಣದಲ್ಲಿ ನಡೆದ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದಲ್ಲಿ ಅವರು ಮಾತನಾಡಿದರು.

ರವಿ ಹಂಜಗೀಮಠ ಅವರ ಕೃತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿರುವುದು ಸಂತಸದ ವಿಷಯವಾಗಿದೆ. ಅದೇ ರೀತಿ ರವಿ ಹಂಜಗೀಮಠ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಬಸವಣ್ಣನವರ ಹೆಸರಿಗೆ ಧಕ್ಕೆ ಬಂದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು ಎಂದು ತಿಳಿಸಿದರು.

ಸಮಾನತೆಗಾಗಿ ಶರಣರು ಪ್ರಾಣತ್ಯಾಗ ಮಾಡಿದ್ದಾರೆ. ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಕೀರ್ತಿ ಅನುಭವ ಮಂಟಪಕ್ಕೆ ಸಲ್ಲುತ್ತದೆ. ನೂತನ ಅನುಭವ ಮಂಟಪ ಉದ್ಘಾಟನೆಯಾಗುವ ಮುನ್ನವೇ ಬಸವ ಜಯಂತಿಯನ್ನು ರಾಷ್ಟ್ರೀಯ ಜಯಂತಿಯಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಸ್ಥಳ ಅನುಭವ ಮಂಟಪವಾಗಿದೆ. ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ನೆಲ ಬಸವಕಲ್ಯಾಣವಾಗಿದ್ದು, ಇದು ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದೆ ಎಂದರು.

ಬಸವಣ್ಣನವರ ಸಂದೇಶಗಳನ್ನು ಜಗತ್ತಿಗೆ ತಲುಪಿಸಲು ಜಾಗತಿಕ ಸಂಶೋಧನಾ ಕೇಂದ್ರ ಸ್ಥಾಪಿಸುವುದು ಅನಿವಾರ್ಯವಾಗಿದೆ. ಶರಣ ಸಾಹಿತ್ಯ ಹಾಗೂ ವಚನ ಸಾಹಿತ್ಯದ ಪರಿಚಯ ಮುಂದಿನ ಯುವ ಪೀಳಿಗೆಗೆ ಆಗಬೇಕು. ಕೆಲ ಕಿಡಿಗೇಡಿಗಳು ಪುಸ್ತಕಗಳನ್ನು ಬರೆಯುವ ಮೂಲಕ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ತಕ್ಕ ಕ್ರಮವಾಗಬೇಕು. ಬಸವಣ್ಣನವರ ಜಯಂತಿಯನ್ನು ರಾಷ್ಟ್ರೀಯ ಮಟ್ಟದ ಜಯಂತಿಯನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ವಿಜಯೇಂದ್ರ ವಿರುದ್ಧ ಆಕ್ರೋಶ :

‘ಹಿಂದೂ ನಾವೆಲ್ಲರೂ ಒಂದು’ ಎಂಬ ನಿಲುವಿನೊಂದಿಗೆ ಸರ್ಕಾರದ ಸವಲತ್ತುಗಳಿಗಾಗಿ ಪ್ರತ್ಯೇಕ ಧರ್ಮದ ವಿಚಾರ ಮಾಡದೆ ಒಗ್ಗಟ್ಟಾಗಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರೋಕ್ಷವಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಲಿಂಗಾಯತ ಸಮುದಾಯದ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು.

ಆ ಜಾತಿ, ಈ ಜಾತಿ, ಆ ಧರ್ಮ, ಈ ಧರ್ಮ ಎಂಬ ಭೇದ ಮಾಡದೆ ನಾವೆಲ್ಲರೂ ಹಿಂದೂಗಳು, ನಾವೆಲ್ಲರೂ ಒಂದು ಎಂಬ ಭಾವನೆಯೊಂದಿಗೆ ಸಾಗಬೇಕು. ಪ್ರತ್ಯೇಕ ಧರ್ಮದ ವಿಚಾರ ಮಾಡಬಾರದು ಎಂದು ವಿಜಯೇಂದ್ರ ಹೇಳುತ್ತಿದ್ದಂತೆ ಅಸಮಾಧಾನಗೊಂಡ ಲಿಂಗಾಯತ ಸಮುದಾಯದ ಮುಖಂಡರು ಭಾಷಣದ ಸಂದರ್ಭದಲ್ಲೇ ವಿರೋಧ ವ್ಯಕ್ತಪಡಿಸಿದರು. ‘ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಜಯವಾಗಲಿ’, ‘ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ಸಿಗಬೇಕು’ ಹಾಗೂ ‘ಗೋ ಬ್ಯಾಕ್ ವಿಜಯೇಂದ್ರ’ ಎಂದು ಘೋಷಣೆಗಳನ್ನು ಕೂಗಿದರು.

“ನಿಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಧರ್ಮವನ್ನು ಬಲಿ ಕೊಡಬಾರದು” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ತೀವ್ರತೆಯಿಂದಾಗಿ ವಿಜಯೇಂದ್ರ ಅವರು ತಮ್ಮ ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದರು. ಇದರಿಂದ ಕಾರ್ಯಕ್ರಮದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ತುಮಕೂರು ಶಿವಸಿದ್ದೇಶ್ವರ್ ಸ್ವಾಮೀಜಿ, ಹಾರಕೂಡ ಚನ್ನವೀರ ಶಿವಾಚಾರ್ಯರು, ಇಳಕಲ್ ಗುರುಮಹಾಂತ ಸ್ವಾಮೀಜಿ, ಭಾಲ್ಕಿಯ ಗುರುಬಸವ ಪಟ್ಟದೇವರು, ಸಂಸದ ಸಾಗರ್ ಖಂಡ್ರೆ, ಶಾಸಕರಾದ ಶರಣು ಸಲಗರ, ಡಾ. ಸಿದ್ಧು ಪಾಟೀಲ್, ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ, ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ್ ಧನ್ನೂರ್, ಬಾಬು ವಾಲಿ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಹಾಗೂ ಗುರುನಾಥ್ ಕೊಳ್ಳೂರ್ ಸೇರಿದಂತೆ ಅನೇಕ ಬಸವ ಅಭಿಮಾನಿಗಳು ಉಪಸ್ಥಿತರಿದ್ದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, “ವೇದಿಕೆಯ ಮೇಲೆ ನೇರವಾಗಿ ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. ಇಂದು ಎಲ್ಲ ಹಿಂದೂಗಳು ಒಗ್ಗಟ್ಟಾಗಿ ಸಾಗಬೇಕಾದ ಕಾಲಘಟ್ಟದಲ್ಲಿದ್ದೇವೆ. ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ತಮಿಳುನಾಡಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಅಲ್ಲಿನ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಅಲ್ಲಿ ಹಿಂದೂಪರ ಸರ್ಕಾರ ಇಲ್ಲದಿರುವುದು. ನಾವು ಹಿಂದೂಗಳು ಜಾತಿ ಹಾಗೂ ಒಳಪಂಗಡಗಳ ಭೇದಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಸಾಗಬೇಕಾಗಿದೆ. ಇದು ದೇಶದ ಅಗತ್ಯವಾಗಿದೆ ಎಂದು ಹೇಳಿದರು.

Tags

LingayatJainismBuddhismBasavalinga Pattadevaru
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X