Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್: ಜು. 12 ರಂದು ಬೃಹತ್ ರಾಷ್ಟ್ರೀಯ...

ಬೀದರ್: ಜು. 12 ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್

ವಾರ್ತಾಭಾರತಿವಾರ್ತಾಭಾರತಿ13 Jun 2025 9:54 PM IST
share
ಬೀದರ್: ಜು. 12 ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್

ಬೀದರ್: ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಅವರು ತಿಳಿಸಿದರು.

ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜುಲೈ 12 ರಂದು ನಡೆಯುವ ಬೃಹತ್ ಲೋಕ ಅದಾಲತ್‌ನ ಪೂರ್ವಸಿದ್ಧತೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೃಹತ್ ಲೋಕ ಅದಾಲತ್‌ ನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣ, ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದು ಹೇಳಿದರು.

ಈ ಹಿಂದೆ ಮಾರ್ಚ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲಾದ್ಯಂತ ಒಟ್ಟು 52,812 ಪ್ರಕರಣಗಳು ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಳಿಸಲಾಗಿದ್ದು, ಇದರಲ್ಲಿ 10,044 ನ್ಯಾಯಾಲಯದಲ್ಲಿನ ಪೆಂಡಿಂಗ್ ಪ್ರಕರಣಗಳು, 42,768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.

ಈ ಬಾರಿಯ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹೆಚ್ಚು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 29,122 ಪ್ರಕರಣಗಳು ಪೆಂಡಿಂಗ್ ಇದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ಎಲ್ಲಾ ಪೂರ್ವ ತಯಾರಿ ಮಾಡಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಲಯದ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆ ಎಂದು ಅವರು ತಿಳಿಸಿದರು.

Tags

Lok adalat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X