Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ...

ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಲೋಕಾಯುಕ್ತ ದಿಢೀರ್ ದಾಳಿ; ಮಾಲಿನ್ಯ ಉಲ್ಲಂಘನೆ ಪತ್ತೆ

ವಾರ್ತಾಭಾರತಿವಾರ್ತಾಭಾರತಿ20 July 2026 8:22 PM IST
share
ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಲೋಕಾಯುಕ್ತ ದಿಢೀರ್ ದಾಳಿ; ಮಾಲಿನ್ಯ ಉಲ್ಲಂಘನೆ ಪತ್ತೆ
18 ಕಾರ್ಖಾನೆಗಳು 'ರೆಡ್ ಲಿಸ್ಟ್'

ಹುಮನಾಬಾದ್: ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಿಂದ ವಾಯು ಮತ್ತು ಜಲ ಮಾಲಿನ್ಯ ಉಂಟಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಎಸ್. ನೇತೃತ್ವದ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ತಹಸೀಲ್ದಾರ್, ಪುರಸಭೆ ಮುಖ್ಯಾಧಿಕಾರಿ ಹಾಗೂ ಡಿವೈಎಸ್‌ಪಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ತಂಡ, ಆರ್. ಕೆಮಿಕಲ್, ಸತ್ಯದೀಪ ಫಾರ್ಮ, ವಿರೂಪಾಕ್ಷ ಆರ್ಗಾನಿಕ್ಸ್, ಕರ್ನಾಟಕ ಪೇಪರ್, ರೆಡಿಸನ್ ಲ್ಯಾಬ್ ಲಿಮಿಟೆಡ್, ಸ್ಪ್ರಿಂಗ್ ಐಸ್ ಕಂಪನಿ, ಲಕ್ಷ್ಮಿ ದುರ್ಗಾ ಡ್ರಗ್ಸ್ ಹಾಗೂ ಕೋರೆ ಕೆಮಿಕಲ್ ಸೇರಿದಂತೆ ಹಲವು ಕಾರ್ಖಾನೆಗಳಿಗೆ ಭೇಟಿ ನೀಡಿ ದಾಖಲೆಗಳು ಹಾಗೂ ಕಾರ್ಯವೈಖರಿಯನ್ನು ಪರಿಶೀಲಿಸಿತು.

ಪರಿಶೀಲನೆ ಬಳಿಕ ಮಾತನಾಡಿದ ಲೋಕಾಯುಕ್ತ ಎಸ್ಪಿ ಸಿದ್ದರಾಜು ಎಸ್., ಮಾಲಿನ್ಯದ ಪ್ರಮಾಣದ ಆಧಾರದ ಮೇಲೆ ಕೈಗಾರಿಕೆಗಳನ್ನು ವರ್ಗೀಕರಿಸಲಾಗಿದ್ದು, 18 ಕಾರ್ಖಾನೆಗಳು ‘ರೆಡ್ ಲಿಸ್ಟ್’, 24 ಕಾರ್ಖಾನೆಗಳು ‘ಆರೆಂಜ್ ಲಿಸ್ಟ್’ ಹಾಗೂ ಐದು ಕಾರ್ಖಾನೆಗಳು ಮಾತ್ರ ‘ಗ್ರೀನ್ ಲಿಸ್ಟ್’ನಲ್ಲಿ ಇರುವುದಾಗಿ ತಿಳಿಸಿದರು.

ರೆಡಿಸನ್ ಲ್ಯಾಬ್ ಸಮೀಪದ ಬಾವಿ, ಸ್ಪ್ರಿಂಗ್ ಐಸ್ ಕಂಪನಿಯ ಬೋರ್‌ವೆಲ್ ಹಾಗೂ ಮತ್ತೊಂದು ಸ್ಥಳದಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಪರಿಶೀಲನೆ ವೇಳೆ ಎರಡು ಕಾರ್ಖಾನೆಗಳು ಪರಿಸರ ನಿಯಮಗಳನ್ನು ಉಲ್ಲಂಘಿಸಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಹಾಗೂ ಕೆಲವು ಕಾರ್ಖಾನೆಗಳಿಂದ ಅತಿಯಾದ ಹೊಗೆ ಹೊರಬರುತ್ತಿರುವುದು ಗಮನಕ್ಕೆ ಬಂದಿದೆ. ಮಾಣಿಕ್ ನಗರ ಗ್ರಾಮದ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಸೇರುತ್ತಿರುವುದು ಕೂಡ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದರು.

ವಿಶೇಷವಾಗಿ ಆರ್.ಕೆ.ಎಂ. ಪ್ರೈವೇಟ್ ಲಿಮಿಟೆಡ್ ಹಾಗೂ ಸತ್ಯದೀಪ್ತ ಕಂಪನಿ ಸರ್ಕಾರದ ಪರಿಸರ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದ್ದು, ಸ್ಥಳ ಪರಿಶೀಲನೆ ಆಧಾರಿತ ಸಮಗ್ರ ವರದಿಯನ್ನು ಉಪ ಲೋಕಾಯುಕ್ತರಿಗೆ ಸಲ್ಲಿಸಲಾಗುವುದು. ಜುಲೈ 27ರಂದು ನಡೆಯಲಿರುವ ವಿಚಾರಣೆಗೆ ಮುನ್ನ ವರದಿ ನೀಡಲಾಗುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಸಿದ್ದರಾಜು ಎಸ್. ತಿಳಿಸಿದರು.

Tags

HumnabadLokayukta
share
ವಾರ್ತಾಭಾರತಿ
ವಾರ್ತಾಭಾರತಿ
Next Story
X