Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕನೇರಿ ಸ್ವಾಮೀಜಿ ವಿರುದ್ಧ ಡಿ.3ರಂದು...

ಕನೇರಿ ಸ್ವಾಮೀಜಿ ವಿರುದ್ಧ ಡಿ.3ರಂದು ಬೀದರ್‌ನಲ್ಲಿ ಬೃಹತ್ ಪ್ರತಿಭಟನೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ25 Nov 2026 6:21 PM IST
share
ಕನೇರಿ ಸ್ವಾಮೀಜಿ ವಿರುದ್ಧ ಡಿ.3ರಂದು ಬೀದರ್‌ನಲ್ಲಿ ಬೃಹತ್ ಪ್ರತಿಭಟನೆ

ಬೀದರ್: ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರನ್ನು ಅವಹೇಳನ ಮಾಡುವುದು ಹಾಗೂ ಸಂವಿಧಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಡಸಿದ್ದೇಶ್ವರ ಕನೇರಿ ಸ್ವಾಮೀಜಿ ವಿರುದ್ಧ ಡಿ.3ರಂದು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಮಂಗಳವಾರ ಜಾತ್ಯತೀತ ನಾಗರಿಕರ ವೇದಿಕೆಯ ಸಹಯೋಗದಲ್ಲಿ ಹಿರಿಯರಾದ ವೈಜನಾಥ್ ಕಮಠಾಣೆ ಅವರ ಅಧ್ಯಕ್ಷತೆಯಲ್ಲಿ ನಡೆದ ಖಂಡನಾ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಿ ಈ ನಿರ್ಧಾರ ಕೈಗೊಂಡರು.

ರಾಜ್ಯದ ವಿವಿಧೆಡೆ ಕನೇರಿ ಸ್ವಾಮೀಜಿ ಆಯೋಜಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶಗಳಲ್ಲಿ ಬಸವಾದಿ ಶರಣರ ವಚನಗಳನ್ನು ತಿರುಚಿ ವ್ಯಾಖ್ಯಾನಿಸುವ ಮೂಲಕ ಶರಣರ ಆಶಯಗಳಿಗೆ ಧಕ್ಕೆ ಉಂಟುಮಾಡಲಾಗುತ್ತಿದೆ. ಅಲ್ಲದೆ, ಲಿಂಗಾಯತ ಮಠಾಧೀಶರನ್ನು ಟೀಕಿಸಿ ಹೀಯಾಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಇತ್ತೀಚೆಗೆ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಕನೇರಿ ಸ್ವಾಮೀಜಿ, ‘ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳು ಅಡಕವಾಗಿವೆ’ ಎಂದು ಹೇಳಿರುವುದನ್ನು ಸಭೆ ತೀವ್ರವಾಗಿ ಖಂಡಿಸಿತು. ಈ ಹೇಳಿಕೆಯು ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಅಪಮಾನ ಮಾಡಿದಂತಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ವಚನ ಸಾಹಿತ್ಯ, ಲಿಂಗಾಯತ ಮಠಾಧೀಶರು ಹಾಗೂ ಭಾರತದ ಸಂವಿಧಾನದ ಕುರಿತು ನೀಡಿರುವ ಹೇಳಿಕೆಗಳನ್ನು ಖಂಡಿಸಿ ಡಿ. 3ರಂದು ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಭೆ ನಿರ್ಣಯಿಸಿತು.

ಪ್ರತಿಭಟನೆಯಲ್ಲಿ ಎಲ್ಲ ಜಾತ್ಯತೀತ ರಾಜಕೀಯ ಪಕ್ಷಗಳು, ಪ್ರಗತಿಪರ ಸಂಘಟನೆಗಳ ಮುಖಂಡರು, ಬಸವಾದಿ ಶರಣರ ಅನುಯಾಯಿಗಳು ಹಾಗೂ ಸಂವಿಧಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಸಭೆ ಕರೆ ನೀಡಿತು.

ಸಭೆಯಲ್ಲಿ ಜಾತ್ಯತೀತ ನಾಗರಿಕರ ವೇದಿಕೆಯ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ, ಅಮೃತರಾವ್ ಚಿಮಕೋಡೆ, ಬಸವಕುಮಾರ್ ಪಾಟೀಲ್, ಶಿವಶರಣಪ್ಪ ಹುಗ್ಗೆ ಪಾಟೀಲ್, ಪಂಡಿತರಾವ್ ಚಿದ್ರಿ, ಅನೀಲಕುಮಾರ್ ಬೆಲ್ದಾರ್, ಬಸವರಾಜ್ ಮಾಳಗೆ, ಬಾಬು ಪಾಸ್ವಾನ್, ಸುರೇಶ್ ಸ್ವಾಮಿ, ಶಂಕರರಾವ್ ದೊಡ್ಡಿ, ಜಗದೀಶ್ವರ್ ಬಿರಾದಾರ್, ವಿನಯಕುಮಾರ್ ಮಾಳಗೆ, ಮಹೇಶ್ ಗೋರನಾಳಕರ್, ಸುಧಾಮಣಿ, ಅರ್ಚನಾ, ಪ್ರಕಾಶ್ ರಾವಣ, ಸಂತೋಷ್ ಜೋಳದಾಬಕೆ, ಶ್ರೀನಿವಾಸ್ ತೇಕಮಾಳ್, ರಮೇಶ್ ಕಟ್ಟಿತುಗಾಂವ್ ಹಾಗೂ ಶಾಮಣ್ಣಾ ಬಾವಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

protestKaneri SwamijiBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X