Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಗೆ...

ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಗೆ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ18 July 2026 7:34 PM IST
share
ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಗೆ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

ಬಸವಕಲ್ಯಾಣ: ಜಿಲ್ಲೆಯ ಅತಿದೊಡ್ಡ ತಾಲೂಕಾಗಿರುವ ಬಸವಕಲ್ಯಾಣದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಲೋಕೇಶ್ ಮೋಳಕೆರೆ ಆಗ್ರಹಿಸಿದ್ದಾರೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಅಂಚೆ ಮೂಲಕ ಮನವಿ ಸಲ್ಲಿಸಿರುವ ಅವರು, ಬಸವಕಲ್ಯಾಣದಿಂದ ಜಿಲ್ಲಾ ಆಸ್ಪತ್ರೆ ಸುಮಾರು 100 ಕಿಲೋಮೀಟರ್ ದೂರದಲ್ಲಿರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಮಹಾರಾಷ್ಟ್ರದ ಉಮರ್ಗಾ, ಸೋಲಾಪುರ ಹಾಗೂ ಲಾತೂರ್‌ನ ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗುತ್ತಿದೆ ಎಂದು ತಿಳಿಸಿದ್ದಾರೆ.

ಬಸವಕಲ್ಯಾಣದ ಸಮೀಪ ರಾಷ್ಟ್ರೀಯ ಹೆದ್ದಾರಿ–65 ಹಾದು ಹೋಗುವುದರಿಂದ ಅಪಘಾತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುವ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಶಾಶ್ವತ ರಕ್ತ ಸಂಗ್ರಹ ಕೇಂದ್ರ (ಬ್ಲಡ್ ಸ್ಟೋರೇಜ್ ಸೆಂಟರ್) ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಲ್ಲದೆ, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗುವಂತೆ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಘಟಕ ಆರಂಭಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಸರ್ಕಾರವನ್ನು ಲೋಕೇಶ್ ಮೋಳಕೆರೆ ಆಗ್ರಹಿಸಿದ್ದಾರೆ.

Tags

hospitalBasavakalyana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X