ನಿಷೇಧಿತ ಮಾಂಜಾ ದಾರ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಮಾಂಜಾ ದಾರ ಬಳಕೆ ಮಾಡಿರುವ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 65ರ ನಿರ್ಣಾಕ್ರಾಸ್ ಬಳಿ ಈ ದಾರಕ್ಕೆ ಸಿಲುಕಿ ದ್ವಿಚಕ್ರ ವಾಹನ ಓಡಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲೆಯಾದ್ಯಂತ ಯಾವುದೇ ಮಳಿಗೆಯಲ್ಲಿ ನಿಷೇಧಿತ ಚೀನಿ ಮಾಂಜಾ ದಾರ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಮತ್ತು ಈ ಪ್ರಕರಣದಲ್ಲಿ ವ್ಯಕ್ತಿಯ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಜನ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅವರು ಲಿಖಿತ ಸೂಚನೆ ನೀಡಿದ್ದಾರೆ.
ತಕ್ಷಣವೇ ಈ ಬಗ್ಗೆ ಜಿಲ್ಲೆಯ ಸಾರ್ವಜನಿಕರ ಮೊಬೈಲ್ ಸಂಖ್ಯೆಗೆ ಸಾಮಾಜಿಕ ತಾಣಗಳ ಮೂಲಕ ಸಂದೇಶ ರವಾನಿಸಿ ಜಾಗೃತಿ ಮೂಡಿಸುವಂತೆ ಆಗ್ರಹಿಸಿದ್ದಾರೆ.
Next Story





