ರಸ್ತೆ ಕಾಮಗಾರಿಗೆ ಸಚಿವ ಈಶ್ವರ್ ಖಂಡ್ರೆ ಅವರಿಂದ ಚಾಲನೆ

ಬೀದರ್ : ಭಾಲ್ಕಿ ತಾಲೂಕಿನ ಹರಣಾಳ ಮತ್ತು ಡಾವರಗಾಂವ್ ಮಾರ್ಗವಾಗಿ ಕುರುಬಖೇಳಗಿ ಗ್ರಾಮದವರೆಗೆ ಸುಮಾರು 6.90 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನ ಜೀವನ ಸುಲಭವಾಗಬೇಕಾದರೆ ಉತ್ತಮ ರಸ್ತೆಗಳ ಅಗತ್ಯವಿದೆ. ಈ ರಸ್ತೆ ಅಭಿವೃದ್ಧಿಯಿಂದ ಈ ಭಾಗದ ಜನರಿಗೆ ಉತ್ತಮ ಸಂಪರ್ಕ ಸೌಲಭ್ಯ ಒದಗಲಿದ್ದು, ಇದು ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಚಟುವಟಿಕೆಗಳ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಭಾಲ್ಕಿ ತಾಲೂಕಿನ ರಸ್ತೆ ಅಭಿವೃದ್ಧಿ ಕಾರ್ಯದಲ್ಲಿ ನಿರಂತರ ಬದಲಾವಣೆಯಾಗುತ್ತಿದ್ದು, ಇದನ್ನು ಮತ್ತಷ್ಟು ವೇಗವಾಗಿ ಮುಂದುವರೆಸಲಾಗುವುದು. ಗ್ರಾಮೀಣ ಪ್ರದೇಶಗಳ ಸಂಪರ್ಕ ಸುಧಾರಣೆ ನಮ್ಮ ಪ್ರಾಥಮಿಕ ಗುರಿಯಾಗಿದ್ದು, ಇದಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿ, ಅಧಿಕಾರಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.





