ಬೀದರ್‌ನಲ್ಲಿ ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸಚಿವ ಈಶ್ವರ್ ಖಂಡ್ರೆ ಅವರಿಂದ ಚಾಲನೆ

ಬೀದರ್ : ಇಂದಿನಿಂದ ರಾಜ್ಯದಾದ್ಯಂತ ಪ್ರಾರಂಭವಾದ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಇಂದು ಭಾಲ್ಕಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಸರಕಾರದ ಪರವಾಗಿ ಹಾಗೂ ನನ್ನ ಪರವಾಗಿ ಬೀದರ್ ಜಿಲ್ಲೆಯ ಹಾಗೂ ಇಡೀ ರಾಜ್ಯದ ಜನತೆಗೆ ವಿನಂತಿ ಮಾಡುವುತ್ತೇನೆ ಎಂದರು.
ಈ ಸಮೀಕ್ಷೆಯ ಉದ್ದೇಶ ರಾಜ್ಯದ 7 ಕೋಟಿಗೂ ಹೆಚ್ಚು ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ನ್ಯಾಯ ಸಿಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಸರಕಾರದ ಸವಲತ್ತುಗಳಿಂದ ವಂಚಿತತರಾಗಬಾರದು ಎಂಬುದಾಗಿದೆ ಎಂದು ಹೇಳಿದರು.
ಈ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಳ್ಳಲು ಈ ಸಮೀಕ್ಷೆ ನಡೆಸುತ್ತಿದ್ದು, 60 ಪ್ರಶ್ನೆಗಳ ಮೂಲಕ ಅದನ್ನು ತಿಳಿದುಕೊಂಡು ಸಮಗ್ರ ವರದಿ ಪಡೆಯಲಾಗುವುದು. ಆ ವರದಿ ಕ್ರೂಢೀಕರಿಸಿ ಅದರ ಆಧಾರದ ಮೇಲೆ ಸರ್ಕಾರದ ಮಟ್ಟದಲ್ಲಿ ಅವರಿಗೆ ಏನೇನು ಸೌಲಭ್ಯಗಳು ನೀಡಬೇಕು ಎನ್ನುವುದರ ಬಗ್ಗೆ ಚಿಂತಿಸಿ, ಅದನ್ನು ಅನುಷ್ಠಾನ ಮಾಡಲಾಗುವುದು ಎಂದರು.





