ವಿಶೇಷ ಚೇತನ ಫಲಾನುಭವಿಗಳಿಗೆ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೀದರ್ : ವಿಶೇಷ ಚೇತನ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿವಿಧ ಸವಲತ್ತುಗಳನ್ನು ವಿತರಿಸಿದರು.
ಇಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು ಶ್ರವಣದೋಷ ಇರುವ 7 ಮಂದಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಹಾಗೂ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕ, ಉಪ ನಿರ್ದೇಶಕ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Next Story