ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೀದರ್ : ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.
ಈ ಸಮಯದಲ್ಲಿ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷಿಸಿದ ಅವರು, ಮಕ್ಕಳ ಕಲಿಕಾ ಆಸಕ್ತಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಸರ್ಕಾರದ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಹಾಗೂ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಸೇರಿದಂತೆ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story