Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ...

ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಿ : ಸಚಿವ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2026 3:16 PM IST
share
ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಿ : ಸಚಿವ ಯತೀಂದ್ರ ಸಿದ್ದರಾಮಯ್ಯ

ಬೀದರ್ : ಜಿಲ್ಲೆಯಲ್ಲಿ ಹಸಿತ್ಯಾಜ್ಯ ಸಂಸ್ಕರಣೆ ಘಟಕ ಕಾರ್ಯಾಚರಣೆಯಲ್ಲಿದ್ದು, ಅದರಂತೆ ಶೀಘ್ರವಾಗಿ ಒಣ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಾಪಿಸಿ ಉತ್ಪಾದನೆಯಾಗುವ ತ್ಯಾಜ್ಯ ವಿಲೇವಾರಿಗಾಗಿ ಸೂಕ್ತ ಕ್ರಮ ವಹಿಸುವಂತೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ವತಿಯಿಂದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಕಸ ವಿಲೇವಾರಿಗಾಗಿ ಪ್ರತಿ ಮನೆ, ಮನೆಗೆ ಭೇಟಿ ನೀಡಿ ಒಣತ್ಯಾಜ್ಯ ಹಾಗೂ ಹಸಿ ತ್ಯಾಜ್ಯಯನ್ನು ಸಂಗ್ರಹಿಸಬೇಕು. ಖಾಲಿ ಇರುವ ಬಡಾವಣೆಗಳಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ವಹಿಸಿ ದಂಡ ಹಾಕಬೇಕು. ನಗರದಲ್ಲಿ ಬೇಕಾ ಬಿಟ್ಟಿ ಪ್ರದರ್ಶನ ಘಟಕಗಳನ್ನು ಹಾಕಲಾಗುತ್ತಿದ್ದು, ಅದರಿಂದ ಬರುವಂತ ತೆರಿಗೆಯನ್ನು ಸಮರ್ಪಕವಾಗಿ ತೆಗೆದುಕೊಳ್ಳುತ್ತಿಲ್ಲ. ಅಂತಹ ಫಲಕಗಳನ್ನು ಗುರುತಿಸಿ ದಂಡವನ್ನು ಹಾಕಬೇಕು. ಇನ್ನೂಮ್ಮೆ ಈ ರೀತಿ ಆಗದಂತೆ ಕ್ರಮವಹಿಸಬೇಕು ಎಂದು ಅವರು ಎಚ್ಚರಿಸಿದರು.

ನಗರವನ್ನು ಸುಂದರ ಹಾಗೂ ಸ್ವಚ್ಛ ನಗರವನ್ನಾಗಿ ಪರಿವರ್ತಿಸಲು ಈಗಾಗಲೇ 200 ಕೋಟಿ ರೂ.ಗಳ ಅನುದಾನ ಘೋಷಿಸಿದ್ದು, ಅನುದಾನ ಯೋಜನೆಯನ್ನು ರೂಪಿಸಬೇಕು. ಹೆಚ್ಚುವರಿ ಅನುದಾನ ಅವಶ್ಯಕತೆ ಇದ್ದಲ್ಲಿ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಬಹುತೇಕ ಶೌಚಾಲಯದಲ್ಲಿ ಶುಚಿತ್ವ ಕಾಪಾಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಅಂತಹ ಗುತ್ತಿಗೆದಾರರಿಗೆ ನೋಟಿಸ್ ಜಾರಿಗೊಳಿಸುವ ಮೂಲಕ ಅವರ ಗುತ್ತಿಗೆಯನ್ನು ರದ್ದು ಪಡಿಸಬೇಕು ಎಂದು ಅವರು ಸೂಚಿಸಿದರು.

ನಗರದ ಪ್ರತಿ ಮನೆಗಳಿಗೂ ಒಳ ಚರಂಡಿ ವ್ಯವಸ್ಥೆಯನ್ನು ಶೀಘ್ರವಾಗಿ ಕಲ್ಪಿಸಿ, ಎಲ್ಲ ಮನೆಗಳಲ್ಲಿ ಈ ಸೌಲಭ್ಯವಿರಬೇಕು. ಗುಣಮಟ್ಟದ ಕಾಮಗಾರಿಗೆ ಹೆಚ್ಚು ಒತ್ತು ನೀಡಬೇಕು. ಹಾಗೆಯೇ ಒಳ ಚರಂಡಿಗಳ ವ್ಯವಸ್ಥೆಯಗಳನ್ನು ಉನ್ನತೀಕರಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿರುವ ಪ್ರತಿಯೊಂದು ಮನೆಗಳಿಗೆ ಜಿಪಿಎಸ್ ಕಲ್ಪಿಸಿ ಮ್ಯಾಪಿಂಗ್ ಮಾಡುವ ಕೆಲಸಗಳು ವೇಗವಾಗಬೇಕು. ಅವರೊಂದಿಗೆ ತೆರಿಗೆ ಸಂಗ್ರಹ ಕೂಡ ಹೆಚ್ಚಿಸಬೇಕು. ಪ್ರತಿಯೊಂದು ಅಂಗಡಿಗಳಲ್ಲಿ ಟ್ರೇಡ್ ಲೈಸನ್ಸ್ ಹೊಂದಿರಬೇಕು. ಟ್ರೇಡ್ ಲೈಸನ್ಸ್ ಹೊಂದಿರದ ಅಂಗಡಿಗಳಿಗೆ ಅನುಮತಿ ನೀಡಬಾರದು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಾಗಬೇಕು ಎಂದರು.

ಈ ಸಭೆಯಲ್ಲಿ ಶಾಸಕ ರಹೀಂ ಖಾನ್, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಮಹಾನಗರ ಪಾಲಿಕೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Minister Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X