ಬೀದರ್ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ್ : 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿ.ಯು.ಸಿ, ಡಿಪ್ಲೋಮಾ ಐ.ಟಿ.ಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ) ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಅಲ್ಪಸಂಖ್ಯಾತರ ಜನಾಂಗಗಳಾದ ಮುಸ್ಲಿಂ-2ಬಿ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಇತರೆ ಜನಾಂಗಗಳಾದ ಪ್ರವರ್ಗ-1, 2ಎ, 3ಎ, 3ಬಿ, ಮತ್ತು ಪ. ಜಾ, ಪ. ಪಂ. ಈ ಜನಾಂಗಳಿಗೆ ಸೇರಿದ ಹೊಸ ವಿದ್ಯಾರ್ಥಿಗಳು ಕೂಡಲೇ ಆನ್‌ಲೈನ್ ಮೂಲಕ ಪ್ರವೇಶವನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಮುಸ್ಲಿಂ 2ಬಿ, ಕ್ರಿಶ್ಚಿಯನ್, ಜೈನ್, ಸಿಖ್ ಪಾರ್ಸಿ, ಬೌದ್ಧ ಹಾಗೂ ಇತರೆ 2.50 ಲಕ್ಷ ರೂ. ಗಳ ಒಳಗಿರಬೇಕು. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ mwd.karnataka.gov.inನಲ್ಲಿ ಜೂ.15ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾಥಿಗಳು ಜೂ.30ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ mwd.karnataka.gov.inಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಸತಿ ನಿಲಯಗಳಿಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 82777 99990, 08482-224150ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ






