Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹಳೆಯ ವಿದ್ಯುತ್ ಕಂಬ, ತಂತಿ ಬದಲಾವಣೆಗೆ...

ಹಳೆಯ ವಿದ್ಯುತ್ ಕಂಬ, ತಂತಿ ಬದಲಾವಣೆಗೆ ಶಾಸಕ ಪ್ರಭು ಚವ್ಹಾಣ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Aug 2026 8:01 PM IST
share
ಹಳೆಯ ವಿದ್ಯುತ್ ಕಂಬ, ತಂತಿ ಬದಲಾವಣೆಗೆ ಶಾಸಕ ಪ್ರಭು ಚವ್ಹಾಣ್ ಒತ್ತಾಯ

ಔರಾದ್: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಹಳ ವರ್ಷಗಳಿಂದ ಬಳಕೆಯಲ್ಲಿರುವ ಹಳೆಯ ಹಾಗೂ ಶಿಥಿಲಗೊಂಡ ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಹಂತ ಹಂತವಾಗಿ ಬದಲಿಸಿ, ಹೊಸ ಕಂಬ ಹಾಗೂ ತಂತಿಗಳನ್ನು ಅಳವಡಿಸುವಂತೆ ಶಾಸಕ ಪ್ರಭು ಚವ್ಹಾಣ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ ಅವರು, ಕ್ಷೇತ್ರದ ಹಲವು ಗ್ರಾಮಗಳಲ್ಲಿ ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಳೆ ಹಾಗೂ ಗಾಳಿ ಸಂದರ್ಭದಲ್ಲಿ ಇವುಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಶಿಥಿಲಗೊಂಡಿರುವ ವಿದ್ಯುತ್ ಮೂಲಸೌಕರ್ಯವನ್ನು ತುರ್ತಾಗಿ ಬದಲಿಸುವ ಅಗತ್ಯವಿದೆ ಎಂದು ಹೇಳಿದರು.

ಶಾಸಕರ ಪ್ರಶ್ನೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಲಿಖಿತ ಉತ್ತರ ನೀಡಿದ್ದು, ಕ್ಷೇತ್ರದಲ್ಲಿರುವ ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದ್ದಾರೆ.

ಆದರೆ ಸಚಿವರ ಲಿಖಿತ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಪ್ರಭು ಚವ್ಹಾಣ್, ಸರ್ಕಾರ ನೀಡಿರುವ ಮಾಹಿತಿಗೂ ಕ್ಷೇತ್ರದಲ್ಲಿನ ವಾಸ್ತವ ಪರಿಸ್ಥಿತಿಗೂ ವ್ಯತ್ಯಾಸವಿದೆ ಎಂದು ಹೇಳಿದರು. ಹಲವು ಗ್ರಾಮಗಳಲ್ಲಿ ವಿದ್ಯುತ್ ತಂತಿಗಳು ಜೋತುಬಿದ್ದಿದ್ದು, ಸಾರ್ವಜನಿಕರಿಗೆ ಅಪಾಯ ಉಂಟುಮಾಡುವ ಸ್ಥಿತಿಯಲ್ಲಿವೆ. ವಿದ್ಯುತ್ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಳೆಯ ಕಂಬ ಹಾಗೂ ತಂತಿಗಳನ್ನು ತುರ್ತಾಗಿ ಬದಲಿಸಿ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

Tags

Prabhu Chauhan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X