Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ...

ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪ್ರಭು ಚವ್ಹಾಣ್ ದಿಢೀರ್ ಭೇಟಿ: ಅವ್ಯವಸ್ಥೆ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ17 Oct 2026 7:11 PM IST
share
ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪ್ರಭು ಚವ್ಹಾಣ್ ದಿಢೀರ್ ಭೇಟಿ: ಅವ್ಯವಸ್ಥೆ ವಿರುದ್ಧ ಆಕ್ರೋಶ

ಔರಾದ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪ್ರಭು ಚವ್ಹಾಣ್ ಅವರು ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ತೆರಳಿದ ಅವರು, ಒಳರೋಗಿಗಳ ಆರೋಗ್ಯ ಸ್ಥಿತಿ, ವೈದ್ಯಕೀಯ ಚಿಕಿತ್ಸೆ, ಔಷಧೋಪಚಾರ ಹಾಗೂ ವೈದ್ಯರು ಮತ್ತು ಸಿಬ್ಬಂದಿಯ ಸ್ಪಂದನೆಯ ಕುರಿತು ರೋಗಿಗಳಿಂದ ಮಾಹಿತಿ ಪಡೆದರು. ಈ ವೇಳೆ ವಾರ್ಡ್‌ಗಳಲ್ಲಿ ಸ್ವಚ್ಛತೆಯ ಕೊರತೆ, ರೋಗಿಗಳ ಹಾಸಿಗೆಗಳ ದುಸ್ಥಿತಿ ಹಾಗೂ ಔಷಧ ತ್ಯಾಜ್ಯಗಳು ಎಲ್ಲೆಂದರಲ್ಲಿ ಬಿದ್ದಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಸಂಬಂಧಿಸಿದ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಕೇಂದ್ರವಾಗಿರಬೇಕೇ ಹೊರತು ಅವ್ಯವಸ್ಥೆಯ ತಾಣವಾಗಬಾರದು ಎಂದು ತಾಕೀತು ಮಾಡಿದ ಅವರು, ಆಸ್ಪತ್ರೆಯ ಆವರಣ ಹಾಗೂ ವಾರ್ಡ್‌ಗಳನ್ನು ಸದಾ ಸ್ವಚ್ಛವಾಗಿಡಬೇಕು. ರೋಗಿಗಳ ಹಾಸಿಗೆಗಳನ್ನು ಪ್ರತಿದಿನ ಸ್ವಚ್ಛಗೊಳಿಸಬೇಕು. ಬಳಸಿದ ಇಂಜೆಕ್ಷನ್‌ಗಳು ಹಾಗೂ ಇತರ ವೈದ್ಯಕೀಯ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ, ನಿಯಮಾನುಸಾರ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಒಳರೋಗಿಗಳಿಗೆ ಗುಣಮಟ್ಟದ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ರಾತ್ರಿ ವೇಳೆ ವೈದ್ಯರು ಕರ್ತವ್ಯಕ್ಕೆ ಹಾಜರಿರುವುದಿಲ್ಲ ಎಂಬ ದೂರುಗಳು ಪದೇಪದೇ ಕೇಳಿಬರುತ್ತಿದ್ದು, ಇಂತಹ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ರಾತ್ರಿ ಪಾಳಿಯಲ್ಲಿಯೂ ವೈದ್ಯರು ಕಡ್ಡಾಯವಾಗಿ ಹಾಜರಿದ್ದು, ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.

ಸಣ್ಣಪುಟ್ಟ ಕಾಯಿಲೆಗಳಿಗೂ ರೋಗಿಗಳನ್ನು ಬೀದರ್‌ಗೆ ಕಳುಹಿಸಲಾಗುತ್ತಿದೆ ಎಂಬ ದೂರುಗಳು ಮುಂದುವರಿದಿರುವುದು ಸರಿಯಲ್ಲ. ಔರಾದ್ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಸಾಧ್ಯವಿರುವ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಬೇಕು. ಆಸ್ಪತ್ರೆಯಲ್ಲಿರುವ ಶಸ್ತ್ರಚಿಕಿತ್ಸಾ ಕೊಠಡಿಯನ್ನು ಸಮರ್ಪಕವಾಗಿ ಬಳಸಿಕೊಂಡು, ಅಗತ್ಯವಿರುವ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಅನೀಲ್ ಎಕಲೂರೆ, ಮುಖಂಡರಾದ ಧೊಂಡಿಬಾ ನರೋಟೆ ಹಾಗೂ ಶಿವಾಜಿರಾವ್ ಪಾಟೀಲ್ ಮುಂಗನಾಳ್ ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Tags

hospitalAuradPrabhu Chavan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X