Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ಶಾಸಕ ಪ್ರಭು ಚವ್ಹಾಣ್‌ ಗ್ರಾಮ...

ಬೀದರ್‌ | ಶಾಸಕ ಪ್ರಭು ಚವ್ಹಾಣ್‌ ಗ್ರಾಮ ವಾಸ್ತವ್ಯ : ಮೂಲ ಸೌಕರ್ಯ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ22 Jun 2026 6:46 PM IST
share
ಬೀದರ್‌ |  ಶಾಸಕ ಪ್ರಭು ಚವ್ಹಾಣ್‌ ಗ್ರಾಮ ವಾಸ್ತವ್ಯ : ಮೂಲ ಸೌಕರ್ಯ ಪರಿಶೀಲನೆ

ಔರಾದ್ : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ ಅವರು ರಾಮುನಾಯಕ ತಾಂಡಾ ಬೋಂತಿಯಲ್ಲಿ ಶನಿವಾರ ಗ್ರಾಮ ವಾಸ್ತವ್ಯ ನಡೆಸಿ, ಅಲ್ಲಿನ ಮೂಲ ಸೌಕರ್ಯ ಪರಿಶೀಲಿಸಿದರು.

ಶನಿವಾರ ಸಾಯಂಕಾಲ ಗ್ರಾಮಕ್ಕೆ ಭೇಟಿ ನೀಡಿದ ಅವರು, ಮನೆಯೊಂದರ ಮುಂದೆ ಹೊರಸಿನ ಮೇಲೆ ಕುಳಿತು ಜನರ ಸಮಸ್ಯೆಗಳನ್ನು ಆಲಿಸಿದರು. ಸ್ಥಳೀಯರು ಒಬ್ಬೊಬ್ಬರಾಗಿ ಗ್ರಾಮದ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಗಮನಕ್ಕೆ ತಂದರು.

ಗ್ರಾಮದಲ್ಲಿನ ಕುಡಿಯುವ ನೀರಿನ ಪೂರೈಕೆ, ಶಾಲಾ ಶಿಕ್ಷಕರ ಮತ್ತು ಅಲ್ಲಿನ ಶಿಕ್ಷಣದ ಹಾಗೂ ಅಂಗನವಾಡಿ ಕೇಂದ್ರದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಗ್ರಾಮದಲ್ಲಿರುವ ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಗ್ರಾಮಸ್ಥರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸ್ಮಶಾನಭೂಮಿ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಜಮೀನು ನೀಡಲು ಒಪ್ಪಿಗೆ ಸೂಚಿಸಿರುವುದನ್ನು ಉಲ್ಲೇಖಿಸಿದ ಅವರು, ಅಗತ್ಯ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸ್ಮಶಾನಭೂಮಿಗೆ ಭೂಮಿ ಮಂಜೂರು ಮಾಡುವ ಕುರಿತು ಕಂದಾಯ ಇಲಾಖೆಯು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.

ಈ ವೇಳೆ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸುವಂತೆ ಸ್ಥಳೀಯರು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಕ್ಷೇತ್ರದ ಹಲವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ರಾಮುನಾಯಕ ತಾಂಡಾವನ್ನೂ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ರಸ್ತೆ, ಶಾಲೆ, ಅಂಗನವಾಡಿ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಗ್ರಾಮಸ್ಥರ ಬಹುತೇಕ ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಸಮುದಾಯ ಭವನದ ಕಾಮಗಾರಿ ಈಗಾಗಲೇ ಕೈಗೊಳ್ಳಲಾಗಿದೆ. ಬಾಕಿ ಉಳಿದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ನಂತರ ಶಾಸಕ ಪ್ರಭು ಚವ್ಹಾಣ ಅವರು ಗ್ರಾಮದ ಹಿರಿಯರಾದ ದೇವು ನಾಯಕ್ ಅವರ ಮನೆಯಲ್ಲಿ ವಾಸ್ತವ್ಯ ಮಾಡಿದರು.

Tags

MLAPrabhu Chavan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X