Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. 12 ವರ್ಷದಲ್ಲಿ ನರೇಂದ್ರ ಮೋದಿ ಅವರ ಸಾಧನೆ...

12 ವರ್ಷದಲ್ಲಿ ನರೇಂದ್ರ ಮೋದಿ ಅವರ ಸಾಧನೆ ಅಪಾರ : ಭಗವಂತ್ ಖೂಬಾ

ವಾರ್ತಾಭಾರತಿವಾರ್ತಾಭಾರತಿ14 Jun 2026 7:22 PM IST
share
12 ವರ್ಷದಲ್ಲಿ ನರೇಂದ್ರ ಮೋದಿ ಅವರ ಸಾಧನೆ ಅಪಾರ : ಭಗವಂತ್ ಖೂಬಾ

ಬೀದರ್ : ಪ್ರಧಾನಿ ನರೇಂದ್ರ ಮೋದಿ ಅವರು ಚುನಾಯಿತ ಪ್ರಧಾನಿಯಾಗಿ 12 ವರ್ಷ 15 ದಿವಸ ಎಂದರೆ ಸುಮಾರು 4,399 ದಿನಗಳ ಆಡಳಿತ ಪೂರೈಸಿ, ಭಾರತ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರ 4,398 ದಿನಗಳ ಮೀರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಅವರ 12 ವರ್ಷದ ಸಾಧನೆ ಅಪಾರವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಅವರು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2014 ಕ್ಕಿಂತ ಮೊದಲು 125 ಕೋಟಿ ಭಾರತದ ಜನರು ಆತಂಕದಲ್ಲಿದ್ದು ವಿಶ್ವಾಸವನ್ನು ಕಳೆದುಕೊಂಡಿದ್ದರು. ಅಂತಹ ಸಮಯದಲ್ಲಿ ನರೇಂದ್ರ ಮೋದಿಯವರು ಭಾರತದ ಜನರಿಗೆ ಭರವಸೆಯನ್ನು ಮೂಡಿಸಿ, ವಿಶ್ವಾಸಗಳಿಸಿ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪಕ್ಷದಿಂದ ಬಹುಮತ ಹೊಂದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇದೀಗ ಭಾರತದ ಭೂ ಭಾಗದ ಶೇ.75 ರಷ್ಟು ಎನ್ ಡಿಎ ಪಕ್ಷ ಆಡಳಿತದಲ್ಲಿದೆ ಎಂದರು.

ಜವಾಹಾರಲಾಲ್ ಅವರ ತಪ್ಪು ನೀತಿಗಳಿಂದ ದೇಶದಲ್ಲಿ ಅನೇಕ ಸಮಸ್ಯೆಗಳು ಉದ್ಭವಿಸಿದ್ದವು. ಆ ಜ್ವಲಂತ ಸಮಸ್ಯೆಗಳಿಗೆ ನರೇಂದ್ರ ಮೋದಿಯವರು ಪರಿಹರಿಸಿದ್ದಾರೆ. ಇದೀಗ 25 ಕೋಟಿ ಕಡಬಡವರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. 81 ಕೋಟಿ ಜನರಿಗೆ ಪ್ರಧಾನ ಮಂತ್ರಿ ಅನ್ನ ಯೋಜನೆ ಮೂಲಕ ಪಡಿತರ ದೊರೆಯುತ್ತಿದೆ. ರೈತರಿಗೆ ನಿರಂತರವಾಗಿ ಗೊಬ್ಬರ, ಬೀಜ, ಕೀಟನಾಶಕ ವಸ್ತುಗಳು ಯಾವುದೇ ರೀತಿಯ ಕೊರತೆ ಇಲ್ಲ. ಎಂ.ಎಸ್ ಸ್ವಾಮಿನಾಥನ್ ನೀಡಿರುವ ವರದಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಿ ಎಂ ಎಸ್ ಪಿ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಳೆ ನಾಶವಾದ ರೈತರಿಗೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದರು.

ಬಡ ಮಹಿಳೆಯರಿಗಾಗಿ 12 ಕೋಟಿ ಗಿಂತ ಹೆಚ್ಚು ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ನೀಡಲಾಗಿದೆ. 12 ಕೋಟಿಗಿಂತ ಹೆಚ್ಚು ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮುಖಾಂತರ 4 ಕೋಟಿ ಜನರಿಗೆ ಪಕ್ಕಾ ಮನೆ ಕಟ್ಟಿಸಿಕೊಡಲಾಗಿದೆ. ಮುದ್ರಾ ಯೋಜನೆ ಅಡಿಯಲ್ಲಿ 55 ಕೋಟಿಗೂ ಹೆಚ್ಚು ಜನ ಲಾಭ ಪಡೆದಿದ್ದಾರೆ. ಅದರಲ್ಲಿ ವಿಶೇಷವಾಗಿ ಸುಮಾರು 32 ಕೋಟಿ ಮಹಿಳೆಯರು ಅದರಲ್ಲಿ ಲಾಭ ಪಡೆದಿದ್ದಾರೆ ಎಂದು ಅವರು ಹೇಳಿದರು.

2014ರ ಕ್ಕಿಂತ ಮೊದಲು ಭಾರತ ದೇಶವು ಬೇರೆ ದೇಶಗಳಿಂದ ಸಾಲ ಪಡೆಯುವುದಕ್ಕೂ ಕೂಡ ಅರ್ಹತೆ ಉಳಿಸಿಕೊಂಡಿರಲಿಲ್ಲ. ಆದರೆ, ನರೇಂದ್ರ ಮೋದಿ ಅವರು ಬಂದ ತಕ್ಷಣ ದೇಶದ ಆರ್ಥಿಕತೆ 4ನೇ ಸ್ಥಾನದಲ್ಲಿದೆ. ನಮ್ಮ ದೇಶ ಇವತ್ತು ಆರ್ಥಿಕ ಸದೃಢತೆಯಿಂದ ಕೂಡಿದೆ. ಐಐಟಿ, ಐಐಎಂ, ಏಮ್ಸ್, ಐಐಐಟಿ, ಮೆಡಿಕಲ್ ಕಾಲೇಜುಗಳು 2014ರ ಮುಂಚೆಕ್ಕಿಂತ ಮೂರು ಪಟ್ಟು ಹೆಚ್ಚಾಗಿವೆ. ಸಾವಿರಾರು ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ, ಚತುಷ್ಪನ ರಸ್ತೆಗಳು, ಗ್ರಾಮೀಣ ಭಾಗದ ರಸ್ತೆಗಳು, ವಿಮಾನ ನಿಲ್ದಾಣಗಳು, ಬಂದರುಗಳು ನಿರ್ಮಿಸಲಾಗಿದೆ ಎಂದರು.

ನರೇಂದ್ರ ಮೋದಿ ಅವರು 32 ರಾಷ್ಟ್ರಗಳಿಂದ ಉನ್ನತ ಪ್ರಶಸ್ತಿಗಳು ಪಡೆದಿದ್ದಾರೆ. ಅದರಲ್ಲಿ 24 ಪ್ರಶಸ್ತಿಗಳು ಅತೀ ಉನ್ನತ ಮಟ್ಟದ್ದಾಗಿವೆ ಎಂದು ಅವರು ತಿಳಿಸಿದರು.

ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಅನೇಕ ಹಗರಣಗಳು ಹೊರಗೆ ಬಂದಿದ್ದವು. ಆದರೆ, ನರೇಂದ್ರ ಮೋದಿ ಅವರ ಅವಧಿಯಲ್ಲಿ ಒಂದೇ ಒಂದು ಹಗರಣ ಕೂಡ ಹೊರಗಡೆ ಬರಲಿಲ್ಲ. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ಹಾಗೆ ನರೇಂದ್ರ ಮೋದಿಯವರು ಆಡಳಿತ ನಡೆಸುತ್ತಿದ್ದಾರೆ ಎಂದರು.

ಮುದ್ರಾ ಯೋಜನೆ, ಜನಧನ ಯೋಜನೆ, ಹರ್ ಘರ್ ಜಲ ಯೋಜನೆ, ಜನೌಷಧಿ ಯೋಜನೆ ಹೀಗೆ ಹತ್ತಾರು ಯೋಜನೆಗಳು ನರೇಂದ್ರ ಮೋದಿ ಅವರು ಭಾರತದ ಜನರಿಗೆ ತಲುಪಿಸಿದ್ದಾರೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ 5 ಲಕ್ಷ ರೂ. ನೀಡಲಾಗುತ್ತಿದೆ. ಬೆಂಗಳೂರಲ್ಲಿ 220 ಕಿಲೋಮೀಟರ್ ಮೆಟ್ರೋ ಮಾಡಿದ್ದಾರೆ. ಹಾಗೆಯೇ ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಜಹಿರಾಬಾದಿನಲ್ಲಿ ಬೃಹತ್ ಕೈಗಾರಿಕೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲಂಗಾಣದ ಜಯರಾಬಾದ್ ನಗರ ಬೀದರ್ ಜಿಲ್ಲೆಗೆ ಹತ್ತಿರವಾಗಿದ್ದರಿಂದ ನಮ್ಮ ಜಿಲ್ಲೆಯವರಿಗೂ ತುಂಬಾ ಸಹಾಯವಾಗಲಿದೆ ಎಂದು ಹೇಳಿದರು.

ದೇಶ ಅಭಿವೃದ್ಧಿಯಾಗಬೇಕಾದರೆ ಮೋದಿ ಅವರೇ ಕಾರಣರಾಗಿದ್ದಾರೆ. ಮೋದಿ ಅವರ ನೇತೃತ್ವದಲ್ಲಿಯೇ ಈ ದೇಶ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ರಘುನಾಥರಾವ್ ಮಲ್ಕಾಪುರೆ, ಈಶ್ವರಸಿಂಗ್ ಠಾಕೂರ್, ಬಾಬು ವಾಲಿ, ಬಸವರಾಜ್ ಪವಾರ್, ಪೀರಪ್ಪ ಔರಾದೆ, ರಾಜಶೇಖರ್, ಶ್ರೀನಿವಾಸ್ ಚೌಧರಿ ಇದ್ದರು.

Tags

Narendra ModiBhagwant Khooba
share
ವಾರ್ತಾಭಾರತಿ
ವಾರ್ತಾಭಾರತಿ
Next Story
X