Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಡಿ.12ರಂದು ರಾಷ್ಟ್ರೀಯ ಲೋಕ ಅದಾಲತ್;...

ಡಿ.12ರಂದು ರಾಷ್ಟ್ರೀಯ ಲೋಕ ಅದಾಲತ್; ಬಾಕಿ ಟ್ರಾಫಿಕ್ ಚಲನ್‌ಗಳಿಗೆ ಶೇ.50ರಷ್ಟು ರಿಯಾಯಿತಿ : ನ್ಯಾ.ಶ್ರೀಕಾಂತ್ ಕುರಣೆ

ವಾರ್ತಾಭಾರತಿವಾರ್ತಾಭಾರತಿ4 Nov 2026 8:06 PM IST
share
ಡಿ.12ರಂದು ರಾಷ್ಟ್ರೀಯ ಲೋಕ ಅದಾಲತ್; ಬಾಕಿ ಟ್ರಾಫಿಕ್ ಚಲನ್‌ಗಳಿಗೆ ಶೇ.50ರಷ್ಟು ರಿಯಾಯಿತಿ : ನ್ಯಾ.ಶ್ರೀಕಾಂತ್ ಕುರಣೆ

ಹುಮನಾಬಾದ್: ಈ ವರ್ಷದ ನಾಲ್ಕನೇ ಹಾಗೂ ಕೊನೆಯ ರಾಷ್ಟ್ರೀಯ ಲೋಕ ಅದಾಲತ್ ಡಿಸೆಂಬರ್ 12ರಂದು ರಾಜ್ಯಾದ್ಯಂತ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಸಿವಿಲ್ ನ್ಯಾಯಾಧೀಶ ಶ್ರೀಕಾಂತ್ ಕುರಣೆ ಮನವಿ ಮಾಡಿದರು.

ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮನವಿಯ ಮೇರೆಗೆ ಕರ್ನಾಟಕ ಸರ್ಕಾರವು ಬಾಕಿ ಇರುವ ಟ್ರಾಫಿಕ್ ಚಲನ್ ಪ್ರಕರಣಗಳಿಗೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

1991ರಿಂದ 2025ರವರೆಗೆ ಬಾಕಿ ಉಳಿದಿರುವ ಲಕ್ಷಾಂತರ ಟ್ರಾಫಿಕ್ ಚಲನ್ ಪ್ರಕರಣಗಳಿಗೆ ದಂಡ ಪಾವತಿಸದ ಕಾರಣ ಇತ್ಯರ್ಥವಾಗದೆ ಉಳಿದಿವೆ. ಇಂತಹ ಪ್ರಕರಣಗಳಿಗೆ ಸರ್ಕಾರ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ. ಅರ್ಧದಷ್ಟು ದಂಡ ಪಾವತಿಸಿದರೆ ಪ್ರಕರಣ ಇತ್ಯರ್ಥವಾಗಲಿದೆ. ಈ ರಿಯಾಯಿತಿ ಅವಕಾಶ ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಇರಲಿದೆ. ವಾಹನ ಸವಾರರು ಸಂಬಂಧಪಟ್ಟ ಪೊಲೀಸ್ ಠಾಣೆ, ನ್ಯಾಯಾಲಯ ಅಥವಾ ಕರ್ನಾಟಕ ಒನ್ ವೆಬ್‌ಸೈಟ್ ಮೂಲಕ ನೇರವಾಗಿ ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಎನ್‌ಐ ಆಕ್ಟ್‌ನಡಿ ದಾಖಲಾಗಿರುವ ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ, ಕಾರ್ಮಿಕ ವಿವಾದ, ಕೆಇಬಿ ಮತ್ತು ನೀರಿನ ಬಿಲ್ ಪ್ರಕರಣಗಳು, ಜೀವನಾಂಶ, ವೈವಾಹಿಕ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು, ಅಪಘಾತ ಪರಿಹಾರ, ಸಂಚಾರಿ ಪ್ರಕರಣಗಳು, ಭೂಸ್ವಾಧೀನ, ಪಿಂಚಣಿ, ಸೇವಾ ವಿಷಯಗಳು, ಕಂದಾಯ ವ್ಯಾಜ್ಯಗಳು ಸೇರಿದಂತೆ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಎರಡೂ ಪಕ್ಷಗಳಿಗೆ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ನ್ಯಾಯಾಲಯದ ಸಮಯವೂ ಉಳಿಯುವುದರ ಜೊತೆಗೆ ಸಂಬಂಧಗಳು ಸುಧಾರಿಸಲು ಸಹಕಾರಿಯಾಗುತ್ತದೆ. ಈ ಕಾರ್ಯಕ್ಕೆ ವಕೀಲರ ಸಂಘದಿಂದಲೂ ಸಂಪೂರ್ಣ ಸಹಕಾರ ದೊರೆಯುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಗಾಯತ್ರಿ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂತೋಷ್ ಬಿ. ಉಪಸ್ಥಿತರಿದ್ದರು.

Tags

Lok Adalat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X