Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. 25 ಕೋಟಿ ರೂ. ವೆಚ್ಚದಲ್ಲಿ ನೂತನ ಜಿಲ್ಲಾ...

25 ಕೋಟಿ ರೂ. ವೆಚ್ಚದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ8 Sept 2025 5:45 PM IST
share
25 ಕೋಟಿ ರೂ. ವೆಚ್ಚದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣ : ಸಚಿವ ಈಶ್ವರ್ ಖಂಡ್ರೆ

ಬೀದರ್ : 10 ಎಕರೆ ಭೂಮಿಯಲ್ಲಿ 25 ಕೋಟಿ ರೂ. ವೆಚ್ಚದ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.

ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಹಲವಾರು ವರ್ಷಗಳಿಂದ ಬೀದರ್ ನಗರದದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣದ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ 10 ಎಕರೆ ಭೂಮಿಯನ್ನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 25 ಕೋಟಿ ರೂ. ವೆಚ್ಚದಲ್ಲಿ ಭವ್ಯವಾದ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ಹಾಗೆಯೇ ಪ್ರತಿ ತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಲ್ಲಾ ಮಕ್ಕಳು ದಸರಾ ಸಿ.ಎಂ ಕಪ್ ಕ್ರೀಡಾಕೂಟ ಭಾಗವಹಿಸಿದ್ದು ಸಂತೋಷದ ವಿಷಯವಾಗಿದೆ. ಪಾಠದ ಜೊತೆಗೆ ಕ್ರೀಡೆಯು ಬಹಳ ಮುಖ್ಯವಾಗಿದೆ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ. ಕ್ರೀಡೆಯಲ್ಲಿ ಅನೇಕರು ಸಾಧನೆ ಮಾಡಿದ್ದಾರೆ. ಮೇಜರ್ ಧ್ಯಾನಚಂದ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಮೇರಿ ಕೊಮ್, ಪಿ.ವಿ. ಸಿಂಧು ಮುಂತಾದವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದು ತಿಳಿಸಿದರು.

ಕ್ರೀಡೆ ಶಿಸ್ತಿನ, ಶ್ರಮದ ಮತ್ತು ಆತ್ಮವಿಶ್ವಾಸದ ಪಾಠ ಕಲಿಸುವ ಅತ್ಯುತ್ತಮ ವೇದಿಕೆಯಾಗಿದೆ. ಯುವಜನರು ತಮ್ಮಲ್ಲಿರುವ ಕೌಶಲ್ಯ, ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊರತರುವುದಕ್ಕೆ ಇಂತಹ ಕ್ರೀಡಾಕೂಟಗಳು ದೊಡ್ಡ ಅವಕಾಶ ಒದಗಿಸುತ್ತವೆ. ದಸರಾ ಸಿ.ಎಂ. ಕಪ್ ಕ್ರೀಡಾಕೂಟವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ಸೇತುವೆಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಸ್ ಸೇರಿದಂತೆ ಇತರೆ ಅಧಿಕಾರಿಗಳು, ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X