Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾಲ್ಕಿ ತಾಲೂಕನ್ನು ಗುಡಿಸಲು...

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತಗೊಳಿಸುವುದೇ ನಮ್ಮ ಗುರಿ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ1 Jun 2025 6:44 PM IST
share
ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತಗೊಳಿಸುವುದೇ ನಮ್ಮ ಗುರಿ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತಗೊಳಿಸುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಭಾಲ್ಕಿಯಲ್ಲಿ ಸಂಸದರ ಕಚೇರಿ ಎದುರುಗಡೆ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, 2013 ರಿಂದ 18ರ ಅವಧಿಯಲ್ಲಿ ನಾವು ಸಚಿವರಾಗಿದ್ದಾಗ ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ 25,000 ಮನೆಗಳಿಗೆ ಹಕ್ಕು ಪತ್ರ ನೀಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ಪೂರ್ಣಗೊಳ್ಳಲಿಲ್ಲ. ಈ ಅವಧಿಯಲ್ಲಿ ಅದನ್ನು ಪೂರ್ಣಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ನಮ್ಮ ಸರಕಾರ ಬಡವರ ಅಭಿವೃದ್ಧಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷೀ ಯೋಜನೆಯ ಅಡಿಯಲ್ಲಿ ಮನೆಯ ಮುಖ್ಯಸ್ಥೆಗೆ ಪ್ರತಿ ತಿಂಗಳಿಗೆ 2 ಸಾವಿರ ರೂ. ನೀಡಲಾಗುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಗೃಹ ಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದೇ ನಮ್ಮ ಸರಕಾರದ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.

ಭಾಲ್ಕಿ ತಾಲೂಕಿಗೆ ಒಟ್ಟು 8 ಸಾವಿರ ಮನೆಗಳು ಮಂಜೂರಾಗಿವೆ. ಅದರಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿಯಲ್ಲಿ 7,000 ಮನೆ ಮತ್ತು ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ 1,000 ಮನೆಗಳು ಮಂಜೂರಾಗಿವೆ. ಜನರಿಗೆ ಅವಶ್ಯಕವಿರುವ ಅನ್ನ, ವಸತಿ, ಶಿಕ್ಷಣ, ಆರೋಗ್ಯ ನೀಡುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಸದ ಸಾಗರ್ ಖಂಡ್ರೆ ಮಾತನಾಡಿ, ಮಳೆ, ಗಾಳಿ, ಬಿಸಿಲಿನಿಂದ ರಕ್ಷಿಸಲು ಒಂದು ಮನೆ ಅವಶ್ಯಕವಾಗಿ ಬೇಕಾಗಿರುತ್ತದೆ. ಕೇವಲ ಭಾಲ್ಕಿ ಮಾತ್ರವಲ್ಲದೆ ಇಡೀ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ 1 ಲಕ್ಷ 20 ಸಾವಿರ ರೂ. ಹಾಗೂ ಪ.ಜಾ. ಪ.ಪಂ ದವರಿಗೆ 1 ಲಕ್ಷ 75 ಸಾವಿರ ರೂ. ಮನೆ ನಿರ್ಮಾಣಕ್ಕಾಗಿ ಹಣ ನೀಡಲಾಗುತ್ತಿದೆ. ಈ ಹಣದಲ್ಲಿ ಉತ್ತಮವಾದ ಮನೆ ನಿರ್ಮಾಣ ಕಷ್ಟವಾಗುತ್ತದೆ. ಆದ್ದರಿಂದ ಒಂದು ಮನೆ ನಿರ್ಮಾಣಕ್ಕೆ 5 ರಿಂದ 7 ಲಕ್ಷ ರೂ.ವರೆಗೆ ಹಣ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಭಾಲ್ಕಿ ತಾಲೂಕಿನ 34 ಗ್ರಾಮ ಪಂಚಾಯತ್‌ನಲ್ಲಿ ಬರುವ ವಿವಿಧ ಗ್ರಾಮಗಳ ಫಲಾನುಭವಿಗಳಿಗೆ ಒಟ್ಟು 2,202 ಮನೆ ಮಂಜೂರಾತಿ ತಿಳುವಳಿಕೆ ಪತ್ರಗಳನ್ನು ವಿತರಿಸಲಾಯಿತು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X