Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಮಹಿಳೆಯರನ್ನು ಸ್ವಾವಲಂಬಿ,...

ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿ : ಸಚಿವ ಈಶ್ವರ್ ಖಂಡ್ರೆ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 March 2025 7:28 PM IST
share
ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಮಹಿಳೆಯರನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಗಳಾಗಿ ಮಾಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರ ಸಂಯುಕ್ತಾಶ್ರಯದಲ್ಲಿ ನಗರದ ಪ್ರತಾಪ ನಗರದ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಗುರುತಿಸಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಮಾ.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಮಹಿಳೆಯರ ಹಕ್ಕು, ಸಮಾನತೆ ಮತ್ತು ಸಾಧನೆಗಳನ್ನು ತಿಳಿಸಲು 1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದು ಘೋಷಿಸಿತು ಎಂದರು.

ನಮ್ಮ ಸರ್ಕಾರ ಈ ವರ್ಷ ಪಂಚ ಗ್ಯಾರಂಟಿಗಾಗಿ 51,000 ಕೋಟಿ ರೂ. ನೀಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೇವೆ. ಮಹಿಳೆಯರಿಗೆ ಉಚಿತವಾಗಿ ಸಂಚಾರಿಸಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ನಿನ್ನೆ ಮಂಡಿಸಿದ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಾಗಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದು ನುಡಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆಯಾಗಿರಬೇಕು. ಮಹಿಳೆ ಪ್ರತಿ ಹಂತದಲ್ಲೂ ಪುರುಷನಷ್ಟೇ ಸಮಾನಳಾಗಿದ್ದಾಳೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಮ್.ಎಚ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ್ ಸೇರಿದಂತೆ ವಿವಿಧ ಇಲಾಖೆಯ ಮಹಿಳಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X